POCO M7 Plus ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌! ಆಫರ್‌ ಬೆಲೆ ನೋಡಿ

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ M7 ಪ್ಲಸ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ

ಪೊಕೊದ ಈ ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಗಳನ್ನು ಪಡೆದಿದೆ

ಪೊಕೊ M7 ಪ್ಲಸ್‌ ಮೊಬೈಲ್‌ Snapdragon 6s Gen 3 ಪ್ರೊಸೆಸರ್‌ ಹೊಂದಿದೆ

POCO M7 Plus ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್‌! ಆಫರ್‌ ಬೆಲೆ ನೋಡಿ

ಗ್ರಾಹಕಸ್ನೇಹಿ ಬೆಲೆಯಲ್ಲಿ ನೂತನ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುವ ಗ್ರಾಹಕರಿಗೆ ಇಲ್ಲಿದೆ ಸಿಹಿಸುದ್ದಿ. ಇದೀಗ POCO M7 Plus ಸ್ಮಾರ್ಟ್‌ಫೋನ್‌ ಆಕರ್ಷಕ ಬೆಲೆ ಇಳಿಕೆ ದರದಲ್ಲಿ ಖರೀದಿಗೆ ಲಭ್ಯವಿದೆ. ಹೌದು, Flipkart ವೆಬ್‌ಸೈಟ್‌ನಲ್ಲಿ ಪೊಕೊ M7 ಪ್ಲಸ್‌ ಭಾರೀ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಪೊಕೊ ಸಂಸ್ಥೆಯ ಈ ಫೋನ್‌ Snapdragon 6s Gen 3 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 7,000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗಾದರೆ Flipkart ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ M7 ಪ್ಲಸ್‌ ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ನಾಳೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Realme 16 5G ಮೊಬೈಲ್‌! ಅಚ್ಚರಿ ಮೂಡಿಸಿದ ಫೀಚರ್ಸ್‌

POCO M7 Plus ಮೊಬೈಲ್‌ ಆಫರ್‌ನಲ್ಲಿ ಲಭ್ಯ

ಪೊಕೊ ಸಂಸ್ಥೆಯ POCO M7 Plus ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 4GB RAM + 128GB ವೇರಿಯಂಟ್‌ ಬೆಲೆ 15,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 14,499 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಮೊಬೈಲ್‌ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

POCO M7 Plus

POCO M7 Plus ಫೀಚರ್ಸ್‌ ಮಾಹಿತಿ

POCO M7 Plus ಫೋನ್‌ ಡಿಸ್‌ಪ್ಲೇಯು 6.9 ಇಂಚಿನ ಪೂರ್ಣ HD+ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 850 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ Snapdragon 6s Gen 3 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್‌ 4GB RAM + 64GB, 6GB + 128GB ಹಾಗೂ 8GB + 128GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಹಾಗೆಯೇ POCO M7 Plus 5G ಫೋನ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್‌ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 8MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 7,000 mAh ಬ್ಯಾಟರಿ ಜೊತೆಗೆ 18W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದು ಧೂಳು ಹಾಗೂ ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo