ಆಫರ್‌ನಲ್ಲಿ POCO M7 Plus ಮೊಬೈಲ್ ಖರೀದಿಸಲು ಇದಕ್ಕಿಂತ ಒಳ್ಳೆಯ ಸಮಯ ಬೇಕೆ?
ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ POCO M7 Plus ಫೋನ್‌ಗೆ ಆಕರ್ಷಕ ರಿಯಾಯಿತಿ
ಪೊಕೊದ ಈ ಸ್ಮಾರ್ಟ್‌ಫೋನ್ Snapdragon 6s Gen 3 ಪ್ರೊಸೆಸರ್ ಅನ್ನು ಪಡೆದಿದೆ
POCO M7 Plus ಮೊಬೈಲ್ 7,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಹೊಂದಿದೆ
ಬಜೆಟ್ ದರದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಇಲ್ಲಿದೆ ಗುಡ್‌ನ್ಯೂಸ್. ಪೊಕೊ ಸಂಸ್ಥೆಯ POCO M7 Plus ಮೊಬೈಲ್ ಈಗ ಭರ್ಜರಿ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಹೌದು, ಪ್ರಸ್ತುತ ಈ ಮೊಬೈಲ್ Flipkart ವೆಬ್‌ಸೈಟ್ ನಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ಪೊಕೊ ಕಂಪನಿಯ ಈ ಮೊಬೈಲ್ Snapdragon 6s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದರೊಂದಿಗೆ 7,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ POCO M7 Plus ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 12GB RAM ಇರುವ Realme GT 7 ಬೆಲೆಯಲ್ಲಿ ಭರ್ಜರಿ ಇಳಿಕೆ! ಆಫರ್ ಬೆಲೆ ಹಾಗೂ ಫೀಚರ್ಸ್ ನೋಡಿ
POCO M7 Plus ಮೊಬೈಲ್‌ಗೆ ಭಾರೀ ಡಿಸ್ಕೌಂಟ್
ಜನಪ್ರಿಯ ಪೊಕೊ ಕಂಪನಿಯ POCO M7 Plus ಮೊಬೈಲ್ ಪ್ರಸ್ತುತ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 4GB RAM + 64GB ವೇರಿಯಂಟ್ ಬೆಲೆ 15,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 12,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು Flipkart Axis ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 600 ರೂಗಳ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಆಕ್ವಾ ಬ್ಲೂ, ಕಾರ್ಬನ್ ಬ್ಲಾಕ್ ಮತ್ತು ಕ್ರೋಮ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

POCO M7 Plus ಮೊಬೈಲ್‌ನ ಪ್ರಮುಖ ಫೀಚರ್ಸ್ ಹೀಗಿವೆ
POCO M7 Plus ಮೊಬೈಲ್ ಡಿಸ್‌ಪ್ಲೇಯು 6.9 ಇಂಚಿನ ಪೂರ್ಣ HD+ ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 144Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 850 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Snapdragon 6s Gen 3 SoC ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್ 4GB RAM + 64GB, 6GB + 128GB ಹಾಗೂ 8GB + 128GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ POCO M7 Plus 5G ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಮಾದರಿಯಲ್ಲಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 8MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 7,000 mAh ಬ್ಯಾಟರಿ ಜೊತೆಗೆ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಅಲ್ಲದೇ ಇದು ಧೂಳು ಹಾಗೂ ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಸಹ ಪಡೆದುಕೊಂಡಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile