ಸ್ಟೈಲಿಶ್ ಲುಕ್ ಇರುವ Poco M8 5G ಮೊಬೈಲ್ ದರದಲ್ಲಿ ಆಕರ್ಷಕ ಇಳಿಕೆ!
ಪೊಕೊ M8 5G ಮೊಬೈಲ್ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್
ಪೊಕೊದ ಈ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ
ಪೊಕೊ ಸಂಸ್ಥೆಯ ಈ ಫೋನ್ 5,520mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ
ಜನಪ್ರಿಯ ಪೊಕೊ ಸಂಸ್ಥೆಯ ಹಲವು ಭಿನ್ನ ದರದ ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ತನ್ನ ಛಾಪು ಮೂಡಿಸಿದೆ. ಆ ಪೈಕಿ ಇತ್ತೀಚಿನ Poco M8 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಪಡೆದುಕೊಂಡಿದೆ. ಇದಲ್ಲದೇ ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಫೋನ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಕ್ವಾಲ್ಕಮ್ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 5,520mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಈ ಮೊಬೈಲ್ ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಪೊಕೊ M8 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಬಜೆಟ್ ಬೆಲೆಯಲ್ಲಿ Lava Bold N2 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜು! ನಾಳೆಯೇ ಲಾಂಚ್
Poco M8 5G ಮೊಬೈಲ್ ಆಫರ್ ಮಾಹಿತಿ
ವೇಗದ ಪ್ರೊಸೆಸರ್ ಒಳಗೊಂಡಂತೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ಪೊಕೊ M8 5G ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 27,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 21,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್ ಕಾರ್ಬನ್ ಬ್ಲ್ಯಾಕ್, ಫ್ರಾಸ್ಟ್ ಸಿಲ್ವರ್ ಮತ್ತು ಗ್ಲೇಶಿಯಲ್ ಬ್ಲೂ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

ಪೊಕೊ M8 5G ಫೀಚರ್ಸ್ ಮಾಹಿತಿ
ಪೊಕೊ M8 5G ಮೊಬೈಲ್ 6.77 ಇಂಚಿನ FHD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ ಉತ್ತಮ ಪಿಕ್ಸಲ್ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ 3200 ನಿಟ್ಸ್‌ಗಳ ಗರಿಷ್ಠ ಬ್ರೈಟ್ನೆಸ್ ಪಡೆದುಕೊಂಡಿದೆ. ಈ ಮೊಬೈಲ್ ಕ್ವಾಲ್ಕಮ್ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್ ಪವರ್ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.
ಪೊಕೊ M8 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ 50MP ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್ 5,520mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಇದರೊಂದಿಗೆ 18W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
