20MP ಸೆಲ್ಫಿ ಕ್ಯಾಮೆರಾ ಇರುವ Poco M8 5G ಮೊಬೈಲ್‌ ದರದಲ್ಲಿ ಈಗ ಭರ್ಜರಿ ಇಳಿಕೆ!

HIGHLIGHTS

ಅಮೆಜಾನ್‌ನಲ್ಲಿ ಪೊಕೊ M8 5G ಬೆಲೆಯಲ್ಲಿ ಭರ್ಜರಿ ಇಳಿಕೆ

ಪೊಕೊ M8 5G ಫೋನ್‌ 5,520mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದೆ

ಪೊಕೊ M8 5G ಮೊಬೈಲ್‌ ಮೂರು ಆಕರ್ಷಕ ಕಲರ್‌ ಆಯ್ಕೆಗಳನ್ನು ಪಡೆದಿದೆ

Poco M8 5G ಸ್ಮಾರ್ಟ್‌ಫೋನ್‌ ಸ್ಟೈಲಿಶ್‌ ಲುಕ್‌ ಜೊತೆಗೆ ಬಜೆಟ್‌ ದರದ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ತಾಣವು ಇದೀಗ ಪೊಕೊ M8 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಘೋಷಿಸಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಪೊಕೊ ಸಂಸ್ಥೆಯ ಈ ಮೊಬೈಲ್‌ ಕ್ವಾಲ್ಕಮ್‌ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಹಾಗೆಯೇ 5,520mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಹೊಂದಿದೆ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ M8 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ ಪ್ಲಾನ್‌ನಲ್ಲಿ 84 ದಿನಗಳ ವ್ಯಾಲಿಡಿಟಿ ಜೊತೆಗೆ ಜಿಯೋಹಾಟ್‌ ಸ್ಟಾರ್‌ ಲಭ್ಯ!

Poco M8 5G ದರದಲ್ಲಿ ಸಖತ್ ಇಳಿಕೆ

ಪೊಕೊ ಕಂಪನಿಯ ಪೊಕೊ M8 5G ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 8GB + 128GB ವೇರಿಯಂಟ್‌ ಬೆಲೆ 22,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 18,899 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಇನ್ನು ಈ ಮೊಬೈಲ್‌ ಮೂರು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಕಾರ್ಬನ್ ಬ್ಲ್ಯಾಕ್, ಫ್ರಾಸ್ಟ್ ಸಿಲ್ವರ್ ಮತ್ತು ಗ್ಲೇಶಿಯಲ್ ಬ್ಲೂ ಕಲರ್‌ ಆಗಿವೆ.

ಪೊಕೊ M8 5G ಫೀಚರ್ಸ್‌ ಮಾಹಿತಿ

ಪೊಕೊ M8 5G ಮೊಬೈಲ್ 6.77 ಇಂಚಿನ FHD+ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ ಉತ್ತಮ ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು ಸ್ಕ್ರೀನ್ 3200 ನಿಟ್ಸ್‌ಗಳ ಗರಿಷ್ಠ ಬ್ರೈಟ್ನೆಸ್‌ ಪಡೆದುಕೊಂಡಿದೆ. ಈ ಮೊಬೈಲ್‌ ಕ್ವಾಲ್ಕಮ್‌ Snapdragon 6 Gen 3 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಮ್ ನಲ್ಲಿ ಕೆಲಸ ಮಾಡಲಿದೆ.

ಪೊಕೊ M8 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ 50MP ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 5,520mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 45W ಫಾಸ್ಟ್ ಚಾರ್ಜಿಂಗ್‌ ಬೆಂಬಲ ಸಹ ಹೊಂದಿದೆ. ಇದರೊಂದಿಗೆ 18W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಸಹ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :