ಬಿಗ್ ಬ್ಯಾಟರಿ ಸೌಲಭ್ಯದ POCO M8 Power ಸ್ಮಾರ್ಟ್‌ಫೋನ್‌ಗೆ ಈಗ ಜಬರ್ದಸ್ತ್‌ ಆಫರ್‌!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ M8 ಪವರ್‌ ಫೋನಿಗೆ ಆಕರ್ಷಕ ಆಫರ್‌

ಪೊಕೊ M8 ಪವರ್‌ ಮೊಬೈಲ್‌ 8,000mAh ಬ್ಯಾಟರಿ ಸೌಲಭ್ಯ ಹೊಂದಿದೆ

ಪೊಕೊ M8 ಪವರ್‌ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ

Flipkart ಆಯೋಜಿಸಿರುವ ವಿಶೇಷ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸಖತ್ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ POCO M8 Power ಮೊಬೈಲ್‌ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ M8 ಪವರ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಕಡಿಮೆ ದರದಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಬೇಕಿದ್ರೆ, Jio ಸಂಸ್ಥೆಯ ಈ ಪ್ಲಾನ್‌ ಬೆಸ್ಟ್‌!

POCO M8 Power ಈಗ ಡಿಸ್ಕೌಂಟ್‌ನಲ್ಲಿ ಲಭ್ಯ

ಗ್ರಾಹಕರ ಸ್ನೇಹಿ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ M8 ಪವರ್‌ ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 54,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 22,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಆರೆಂಜ್, ಗ್ರೀನ್‌ ಮತ್ತು ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ಪೊಕೊ M8 ಪವರ್‌ ಫೋನಿನ ಫೀಚರ್ಸ್‌ ಹೀಗಿವೆ

ಪೊಕೊ M8 ಪವರ್‌ ಫೋನ್‌ 6.83 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿವೆ. ಇದರ ಡಿಸ್‌ಪ್ಲೇಯು 120Hz ವರೆಗೆ ರಿಫ್ರೆಶ್ ರೇಟ್‌ ಜೊತೆಗೆ 1,800 nits ವರೆಗೆ ಗರಿಷ್ಠ ಬ್ರೈಟ್ನೆಸ್‌ ಸಫೋರ್ಟ್‌ ಪಡೆದಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ನಿಂದ ರಕ್ಷಿಸಲಾಗಿದೆ ಮತ್ತು ವೆಟ್ ಟಚ್ 2.0 ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್ 4 ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ 6GB RAM + 128GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ಪೊಕೊ M8 ಪವರ್‌ ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8MP ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 8,000mAh ಸಿಲಿಕಾನ್‌ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದಿದೆ. ಇದು ಹೈಪರ್‌OS 3 ಬೆಂಬಲದೊಂದಿಗೆ ಆಂಡ್ರಾಯ್ಡ್‌ 16 ಓಎಸ್‌ ಸಪೋರ್ಟ್‌ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :