ಪವರ್‌ಫುಲ್‌ ಬ್ಯಾಟರಿ ಬ್ಯಾಕ್‌ಅಪ್‌ ಇರುವ Poco X8 5G ಬೆಲೆಯಲ್ಲಿ ಸಖತ್‌ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ X8 ಫೋನಿಗೆ ಸಖತ್ ಡಿಸ್ಕೌಂಟ್‌

ಪೊಕೊ X8 ಮೊಬೈಲ್‌ 9,000mAh ಬ್ಯಾಟರಿ ಸಪೋರ್ಟ್‌ ಪಡೆದಿದೆ

ಪೊಕೊ X8 ಫೋನ್‌ ಸ್ನಾಪ್‌ಡ್ರಾಗನ್ 6s Gen 4 ಪ್ರೊಸೆಸರ್‌ ಹೊಂದಿದೆ

ಪೊಕೊ ಕಂಪನಿಯ Poco X8 5G ಮೊಬೈಲ್‌ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್ 6s Gen 4 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ 50MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ವೈಟ್‌, ಆರೆಂಜ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ X8 ಮೊಬೈಲ್‌ಗೆ ಲಭ್ಯವಿರುವ ಆಫರ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಮೆಜಾನ್‌ ಸೇಲ್‌ನಲ್ಲಿ ದೈತ್ಯ iQOO 15R ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

Poco X8 5G ಮೊಬೈಲ್‌ಗೆ ಭಾರೀ ಆಫರ್‌

ಸ್ಟೈಲಿಶ್‌ ಲುಕ್ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಮೊಬೈಲ್‌ ಪ್ರಿಯರ ಗಮನ ಸೆಳೆದಿರುವ ಪೊಕೊ X8 ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 64,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ ಫ್ಲಿಪ್‌ಕಾರ್ಟ್‌ ಬಿಗ್ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಕಾಣಿಸಿಕೊಂಡಿದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಮೊಬೈಲ್‌ ವೈಟ್‌, ಆರೆಂಜ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ.

POCO X8

ಪೊಕೊ X8 ಮೊಬೈಲ್‌ ಫೀಚರ್ಸ್‌

ಪೊಕೊ X8 ಮೊಬೈಲ್‌ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 3,500 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6s Gen 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಹಾಗೆಯೇ ಪೊಕೊ X8 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 9,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 67W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಮತ್ತು 22.5W ವೈರ್ಡ್ ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :