ಬರೋಬ್ಬರಿ 10,000mAh ಬ್ಯಾಟರಿ ಸೌಲಭ್ಯ ಇರುವ Poco X8 ಬೆಲೆಯಲ್ಲಿ ಸಖತ್ ಇಳಿಕೆ!

Highlights

ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ X8 ಮೊಬೈಲ್‌ಗೆ ಬಿಗ್ ಆಫರ್‌

ಪೊಕೊ X8 ಮೊಬೈಲ್‌ 10,000mAh ಬ್ಯಾಟರಿ ಸೌಲಭ್ಯ ಪಡೆದಿದೆ

ಪೊಕೊ X8 ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ಗಳಲ್ಲಿ ಲಭ್ಯ

Flipkart Big Bang Diwali Sale: ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Poco X8 ಸ್ಮಾರ್ಟ್‌ಫೋನ್‌ ಸಹ ಸ್ಪೆಷಲ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಸ್ನಾಪ್‌ಡ್ರಾಗನ್ 6 Gen 5 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 10,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಪೊಕೊ X8 ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Poco X8 ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ X8 ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 64,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ ಬ್ಯಾಂಕ್‌ ಆಫರ್‌ಗಳ ಮೂಲಕ 24,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಬ್ಲ್ಯಾಕ್, ಫೈರಿ ಆರೆಂಜ್ ಮತ್ತು ಫ್ರಾಸ್ಟ್ ವೈಟ್ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

ಪೊಕೊ X8 ಮೊಬೈಲ್‌ ಫೀಚರ್ಸ್‌

ಪೊಕೊ X8 ಸ್ಮಾರ್ಟ್‌ಫೋನ್‌ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 3,500 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6 Gen 5 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಹಾಗೆಯೇ ಪೊಕೊ X8 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 32MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಮತ್ತು 27W ವೈರ್ಡ್ ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

View full profile