ಇಂದಿನಿಂದ Poco X8 Power ಸ್ಮಾರ್ಟ್‌ಫೋನ್ ಮಾರಾಟ ಪ್ರಾರಂಭ; 10,000mAh ಬ್ಯಾಟರಿ
ಇಂದು (ಸೆಪ್ಟೆಂಬರ್ 11 ರಿಂದ) ಪೊಕೊ X8 ಪವರ್ ಮೊಬೈಲ್ ಸೇಲ್
ಪೊಕೊ X8 ಪವರ್ ಮೊಬೈಲ್ 10,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ
ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 Gen 5 ಪ್ರೊಸೆಸರ್ ಹೊಂದಿದೆ
ಲೀಡಿಂಗ್ ಮೊಬೈಲ್ ಬ್ರಾಂಡ್ ಪೊಕೊದ ಇತ್ತೀಚಿನ Poco X8 Power ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್ ಹಾಗೂ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇಂದು (ಸೆಪ್ಟೆಂಬರ್ 11 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಮೊದಲ ಸೇಲ್ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6 Gen 5 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ 10,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್ ಬ್ಲ್ಯಾಕ್ ಮತ್ತು ಯೆಲ್ಲೊ ಕಲರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ಪೊಕೊ X8 ಪವರ್ ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : iPhone 18 Pro ಬಿಡುಗಡೆಯ ಬೆನ್ನಲ್ಲೇ ಶಾಕ್ ಕೊಟ್ಟ ಆಪಲ್! ದಿಢೀರ್ iPhone 17 ಬೆಲೆ ಭಾರಿ ಏರಿಕೆ
ಇಂದು Poco X8 Power ಮೊಬೈಲ್ ಸೇಲ್
ಬಜೆಟ್ ಬೆಲೆಯಲ್ಲಿ ಹೊಸದಾಗಿ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಪೊಕೊ X8 ಪವರ್ ಮೊಬೈಲ್ ಇಂದು (ಸೆಪ್ಟೆಂಬರ್ 11 ರಿಂದ) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಸೇಲ್ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ ಸ್ಟೋರೇಜ್ ವೇರಿಯಂಟ್ 29,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಬ್ಲ್ಯಾಕ್ ಮತ್ತು ಯೆಲ್ಲೊ ಕಲರ್ ಆಯ್ಕೆ ಪಡೆದುಕೊಂಡಿದೆ. ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿ ಮಾಡಬಹುದು.

ಪೊಕೊ X8 ಪವರ್ ಮೊಬೈಲ್ ಫೀಚರ್ಸ್
ಪೊಕೊ X8 ಪವರ್ ಮೊಬೈಲ್ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 120Hz ರಿಫ್ರೆಶ್ ರೇಟ್ ಜೊತೆಗೆ 3,500 nits ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6 Gen 5 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 + IP69K ರೇಟಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ.
ಹಾಗೆಯೇ ಪೊಕೊ X8 ಪವರ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 32MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 27W ವೈರ್ಡ್ ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
