ದೇಶೀಯ ಮಾರುಕಟ್ಟೆಯಲ್ಲಿ Poco X8 ಸ್ಮಾರ್ಟ್‌ಫೋನ್‌ ಲಾಂಚ್! 9,000mAh ಬ್ಯಾಟರಿ

HIGHLIGHTS

ಪೊಕೊ X8 ಫೋನ್‌ 9,000mAh ಬ್ಯಾಟರಿ ಪಡೆದುಕೊಂಡಿದೆ

ಪೊಕೊ X8 ಸ್ಮಾರ್ಟ್‌ಫೋನ್‌ 50MP ಕ್ಯಾಮೆರಾ ಒಳಗೊಂಡಿದೆ

ಈ ಸ್ಮಾರ್ಟ್‌ಫೋನ್‌ ಮೂರು ಆಕರ್ಷಕ ಕಲರ್‌ ಆಯ್ಕೆ ಪಡೆದಿದೆ

ದೇಶೀಯ ಮಾರುಕಟ್ಟೆಯಲ್ಲಿ Poco X8 ಸ್ಮಾರ್ಟ್‌ಫೋನ್‌ ಲಾಂಚ್! 9,000mAh ಬ್ಯಾಟರಿ

ಜನಪ್ರಿಯ ಪೊಕೊ ಮೊಬೈಲ್‌ ಕಂಪನಿಯು ಹೊಸದಾಗಿ Poco X8 ಸ್ಮಾರ್ಟ್‌ಫೋನ್‌ ಅನ್ನು ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ ಮೊಬೈಲ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6s Gen 4 ಚಿಪ್‌ಸೆಟ್ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ 120Hz ರಿಫ್ರೆಶ್ ರೇಟ್‌ ಜೊತೆಗೆ 9,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್, ಫೈರಿ ಆರೆಂಜ್ ಮತ್ತು ಫ್ರಾಸ್ಟ್ ವೈಟ್ ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ಪೊಕೊ X8 ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Teachers Day Special: AI, ಸ್ಮಾರ್ಟ್‌ಫೋನ್ ಯುಗದಲ್ಲೂ ಶಿಕ್ಷಕರ ಮಹತ್ವ ಏಕೆ ಕಡಿಮೆಯಾಗುವುದಿಲ್ಲ?

Poco X8 ಮೊಬೈಲ್‌ ಬೆಲೆ ಹಾಗೂ ಲಭ್ಯತೆ

ಪೊಕೊ ಕಂಪನಿಯ ಪೊಕೊ X8 ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ ಸ್ಟೋರೇಜ್‌ ವೇರಿಯಂಟ್‌ 29,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಬ್ಲ್ಯಾಕ್, ಫೈರಿ ಆರೆಂಜ್ ಮತ್ತು ಫ್ರಾಸ್ಟ್ ವೈಟ್ ಕಲರ್‌ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಎರಡೂ ಮೊಬೈಲ್‌ಗಳು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ನಲ್ಲಿ ಮಾರಾಟಕ್ಕೆ ಬರಲಿವೆ.

poco x8 5g

ಪೊಕೊ X8 ಮೊಬೈಲ್‌ ಫೀಚರ್ಸ್‌

ಪೊಕೊ X8 ಮೊಬೈಲ್‌ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 3,500 nits ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 6s Gen 4 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್‌ IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಸಹ ಪಡೆದುಕೊಂಡಿದೆ.

ಹಾಗೆಯೇ ಪೊಕೊ X8 ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 9,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 67W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಮತ್ತು 22.5W ವೈರ್ಡ್ ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile