Poco ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ Poco X8 Pro 5G ಮತ್ತು Poco X8 Pro Max 5G ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ಗಳು ನಾಳೆಯಿಂದ (ಮಾರ್ಚ್ 23 ರಿಂದ) ಖರೀದಿಗೆ ಲಭ್ಯವಾಗಲಿವೆ. ಅಂದಹಾಗೆ ಈ ಎರಡು ಮೊಬೈಲ್‌ಗಳು 9,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿವೆ. ಹಾಗೆಯೇ 20MP ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿವೆ. ಇದರೊಂದಿಗೆ ಆಕರ್ಷಕ ಕಲರ್ ಆಯ್ಕೆಗಳನ್ನು ಪಡೆದುಕೊಂಡಿವೆ. ಹಾಗಾದರೆ ಪೊಕೊ X8 ಪ್ರೊ 5G ಹಾಗೂ ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್‌ಗಳ ಮಾರಾಟ ದಿನಾಂಕ, ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಸ್ಟೈಲಿಶ್ ಲುಕ್ ಇರುವ Realme NARZO 80 Pro 5G ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ
ಈ ಸ್ಮಾರ್ಟ್‌ಫೋನ್‌ಗಳು ನಾಳೆಯಿಂದ (ಮಾರ್ಚ್ 23 ರಿಂದ) ಖರೀದಿಗೆ ಲಭ್ಯವಾಗಲಿವೆ. ಪೊಕೊ X8 ಪ್ರೊ 5G ಮೊಬೈಲ್‌ನ ಆರಂಭಿಕ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 29,999 ರೂಗಳು ಆಗಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 32,999 ರೂಗಳು ಆಗಿದೆ. ಹಾಗೆಯೇ ಪೊಕೊ X8 ಪ್ರೊ 5G ಐರನ್ ಮ್ಯಾನ್ ವೇರಿಯಂಟ್ (12GB RAM + 256GB) ಬೆಲೆ 34,999 ರೂಗಳು ಆಗಿದೆ. ಇನ್ನು ಈ ಮೊಬೈಲ್ ಬ್ಲ್ಯಾಕ್, ಗ್ರೀನ್ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್‌ನ ಆರಂಭಿಕ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂಗಳು ಆಗಿದೆ. ಹಾಗೆಯೇ 12GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 43,999 ರೂಗಳು ಆಗಿದೆ. ಇನ್ನು ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ನೂತನ ಪೊಕೊ X8 ಪ್ರೊ 5G ಮೊಬೈಲ್ 6.59 ಇಂಚಿನ AMOLED ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 3500 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 8500 Ultra ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 8GB RAM + 256GB ಹಾಗೂ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP66 + IP68 + IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಪೊಕೊ X8 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರ ಮೊದಲ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ದ್ವಿತೀಯ ಕ್ಯಾಮೆರಾ 8MP ಸೆನ್ಸರ್ ಸೌಲಭ್ಯ ಪಡೆದಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಫೋನ್ 9,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಪಡೆದುಕೊಂಡಿದೆ.
ನೂತನ ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ 6.83 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 3500 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 9500s ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB RAM + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP66 + IP68 + IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 8MP ಮೊನೊಕ್ರೋಮ್ ಸೆನ್ಸರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 9,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಹಾಗೆಯೇ 27W ರಿಚರ್ಸ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ.