9,000mAh ಬ್ಯಾಟರಿಯೊಂದಿಗೆ ಭಾರತದಲ್ಲಿ Poco X8 Pro Max 5G ಮೊಬೈಲ್ ಲಾಂಚ್!
ಮಾರ್ಚ್ 23 ರಿಂದ ಪೊಕೊ X8 ಪ್ರೊ ಮ್ಯಾಕ್ಸ್ 5G ಫೋನ್ ಸೇಲ್ ಶುರು
ಪೊಕೊದ ಈ ಮೊಬೈಲ್ 50MP ಸೆನ್ಸಾರ್‌ನ ಮುಖ್ಯ ಕ್ಯಾಮೆರಾ ಪಡೆದುಕೊಂಡಿದೆ
ಪೊಕೊದ ಈ ಮೊಬೈಲ್ 9,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ
ಪೊಕೊ ಕಂಪನಿಯ ನೂತನ Poco X8 Pro Max 5G ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 17 ರಂದು) ಭಾರತದಲ್ಲಿ ಬಿಡುಗಡೆ ಆಗಿದೆ. ಈಗಾಗಲೇ ಭಾರೀ ಕುತೂಹಲ ಮೂಡಿಸಿದ್ದ ಈ ಮೊಬೈಲ್ ಆಕ್ಟಾ ಕೋರ್ MediaTek Dimensity 9500 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ 9,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಹೊಂದಿದೆ. ಹಾಗೆಯೇ ಈ ಮೊಬೈಲ್‌ನ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹಾಗಾದರೆ ಪೊಕೊ X8 ಪ್ರೊ ಮ್ಯಾಕ್ಸ್ 5G ಸ್ಮಾರ್ಟ್‌ಫೋನ್‌ನ ಬೆಲೆ, ಮಾರಾಟ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಸದ್ದಿಲ್ಲದೆ ಭಾರತದಲ್ಲಿ Oppo K14 5G ಸ್ಮಾರ್ಟ್‌ಫೋನ್ ಲಾಂಚ್! ಬೆಲೆ ಮತ್ತು ಫೀಚರ್ಸ್ ನೋಡಿ
Poco X8 Pro Max 5G ಮೊಬೈಲ್ ಬೆಲೆ ಮತ್ತು ಲಭ್ಯತೆ
ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ ಮೀಡ್‌ರೇಂಜ್ ಪ್ರೈಸ್‌ಟ್ಯಾಗ್ ಪಡೆದಿದೆ. ಈ ಮೊಬೈಲ್‌ನ ಆರಂಭಿಕ 12GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂಗಳು ಆಗಿದೆ. ಹಾಗೆಯೇ 12GB RAM + 512GB ಸ್ಟೋರೇಜ್ ವೇರಿಯಂಟ್ ಬೆಲೆ 43,999 ರೂಗಳು ಆಗಿದೆ. ಅಂದಹಾಗೆ ಈ ಫೋನ್ ಇದೇ ಮಾರ್ಚ್ 23 ರಿಂದ ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ. ಇನ್ನು ಈ ಮೊಬೈಲ್ ಬ್ಲ್ಯಾಕ್, ಬ್ಲೂ ಮತ್ತು ವೈಟ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ ಫೀಚರ್ಸ್ ಹೀಗಿವೆ
ನೂತನ ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ 6.83 ಇಂಚಿನ ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 3500 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಆಕ್ಟಾ ಕೋರ್ MediaTek Dimensity 9500s ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಇದಕ್ಕೆ ಪೂರಕವಾಗಿ 12GB RAM + 256GB ಹಾಗೂ 12GB RAM + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಮೊಬೈಲ್ IP66 + IP68 + IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಪೊಕೊ X8 ಪ್ರೊ ಮ್ಯಾಕ್ಸ್ 5G ಮೊಬೈಲ್ ಹಿಂಬದಿಯಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಆಗಿದ್ದು ಸೆಕೆಂಡರಿ ಕ್ಯಾಮೆರಾ 8MP ಮೊನೊಕ್ರೋಮ್ ಸೆನ್ಸರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 9,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರುವ ಜೊತೆಗೆ 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಹೊಂದಿದೆ. ಹಾಗೆಯೇ 27W ರಿಚರ್ಸ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದುಕೊಂಡಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile