Poco X8 Pro Max ಮೊಬೈಲ್ ಬೆಲೆಯಲ್ಲಿ ಸಖತ್ ಡಿಸ್ಕೌಂಟ್; ಜಬರ್ದಸ್ತ್ ಫೀಚರ್ಸ್
ಫ್ಲಿಪ್ಕಾರ್ಟ್ನಲ್ಲಿ ಪೊಕೊ X8 ಪ್ರೊ ಮ್ಯಾಕ್ಸ್ ಫೋನಿಗೆ ಆಕರ್ಷಕ ಆಫರ್
ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್ 9000mAh ಬ್ಯಾಟರಿ ಸೌಲಭ್ಯ ಹೊಂದಿದೆ
ಪೊಕೊ X8 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ ಮೂರು ಆಕರ್ಷಕ ಬಣ್ಣಗಳಲ್ಲಿ ಲಭ್ಯ
Flipkart Big Bang Diwali Sale: ಫ್ಲಿಪ್ಕಾರ್ಟ್ ಆಯೋಜಿಸಿರುವ ಹಬ್ಬದ ಮಾರಾಟದಲ್ಲಿ ಆಯ್ದ ಮೊಬೈಲ್ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯವಿದೆ. ಆ ಪೈಕಿ ಪೊಕೊ ಕಂಪನಿಯ Poco X8 Pro Max ಸ್ಮಾರ್ಟ್ಫೋನ್ ಸಹ ಸ್ಪೆಷಲ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್ಗಳ ಕೊಡುಗೆಗಳು ಹಾಗೂ ಎಕ್ಸ್ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9500s ಚಿಪ್ಸೆಟ್ ಪ್ರೊಸೆಸರ್ ಪವರ್ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್ಫೋನ್ 9000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಫ್ಲಿಪ್ಕಾರ್ಟ್ ಇ ಕಾಮರ್ಸ್ ವೆಬ್ಸೈಟ್ನಲ್ಲಿ ಪೊಕೊ X8 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ದೀರ್ಘಾವಧಿ ವ್ಯಾಲಿಡಿಟಿ ಜೊತೆಗೆ ಅಧಿಕ ಡೇಟಾ ಸೌಲಭ್ಯಕ್ಕಾಗಿ Jio ಟೆಲಿಕಾಂನ ಈ ಪ್ಲಾನ್ ಉತ್ತಮ!
Poco X8 Pro Max ಈಗ ಆಫರ್ನಲ್ಲಿ ಲಭ್ಯ
ಬಜೆಟ್ ದರ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್ ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 57,999 ರೂ.ಗಳು ಆಗಿದ್ದು, ಆದರೆ ಆಫರ್ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್ಗಳ ಮೂಲಕ 45,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಬ್ಲ್ಯಾಕ್, ವೈಟ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.

ಪೊಕೊ X8 ಪ್ರೊ ಮ್ಯಾಕ್ಸ್ ಫೀಚರ್ಸ್ ಹೀಗಿವೆ
ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್ 6.83 ಇಂಚಿನ ಪೂರ್ಣ HD+ ಡಿಸ್ಪ್ಲೇ ಪಡೆದಿದ್ದು ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಹೊಂದಿದೆ. ಹಾಗೆಯೇ ಇದರ ಸ್ಕ್ರೀನ್ 3,500 nits ಬ್ರೈಟ್ನೆಸ್ ಹೊಂದಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ಸಪೋರ್ಟ್ ಒಳಗೊಂಡಿದೆ. ಈ ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9500s ಚಿಪ್ಸೆಟ್ ಪ್ರೊಸೆಸರ್ ಪವರ್ ಪಡೆದಿದೆ. ಹಾಗೆಯೇ ಇದು IP66/IP68/IP69/IP69K ರೇಟಿಂಗ್ ಆಯ್ಕೆಗಳನ್ನು ಪಡೆದಿದೆ.
ಪೊಕೊ X8 ಪ್ರೊ ಮ್ಯಾಕ್ಸ್ ಸ್ಮಾರ್ಟ್ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಸೆಕೆಂಡರಿ ಕ್ಯಾಮೆರಾ 50MP ಸೆನ್ಸಾರ್ ಸೌಲಭ್ಯ ಪಡೆದಿದ್ದು, ತೃತೀಯ ಕ್ಯಾಮೆರಾ 8MP ಸೆನ್ಸಾರ್ ಸೌಲಭ್ಯ ಪಡೆದಿದೆ. ಅಲ್ಲದೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 20MP ಮೆಗಾಪಿಕ್ಸಲ್ ಕ್ಯಾಮೆರಾ ನೀಡಲಾಗಿದೆ. ಇನ್ನು ಈ ಮೊಬೈಲ್ 9000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಒಳಗೊಂಡಿರುವ ಜೊತೆಗೆ100W ಫಾಸ್ಟ್ ಚಾರ್ಜಿಂಗ್, 27W ರಿವರ್ಸ್ ಚಾರ್ಜಿಂಗ್ ಮತ್ತು ಬೈಪಾಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್ಇಂಡಿಯಾ ಸಂಸ್ಥೆಯ ಗಿಜ್ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
