ಭಾರತದಲ್ಲಿ ಪೊಕೊ ಮೊಬೈಲ್ ಸಂಸ್ಥೆಯು ಹೊಸದಾಗಿ ಪೊಕೊ X8 ಪ್ರೊ ಸರಣಿಯ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಮುಂಬರುವ ಈ ಸರಣಿಯು POCO X8 Pro ಮತ್ತು POCO X8 Pro Max ಹೆಸರಿನ ಸ್ಮಾರ್ಟ್‌ಫೊನ್‌ಗಳನ್ನು ಒಳಗೊಂಡಿರಲಿದೆ. ಈ ಎರಡು ಫೋನ್‌ಗಳ ಪೈಕಿ ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್ ಹೆಚ್ಚು ಶಕ್ತಿಶಾಲಿ ಆಗಿರುವ ಸಾಧ್ಯತೆಗಳು ಇವೆ. ಹಾಗೆಯೇ ಪೊಕೊ X8 ಪ್ರೊ ಮ್ಯಾಕ್ಸ್ ಫೋನ್ MediaTek Dimensity 9500 ಪ್ರೊಸೆಸರ್ ಪಡೆದಿರುವ ಜೊತೆಗೆ 8,500mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಪಡೆದಿರುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಮೊಬೈಲ್ ಗೇಮರುಗಳಿಗಾಗಿ ಮತ್ತು ಪವರ್ ಬಳಕೆದಾರರಿಗೆ ಹೇಳಿ ಮಾಡಿಸಿದಂತಿದೆ. ಹಾಗಾದರೆ ಪೊಕೊ X8 ಪ್ರೊ ಸರಣಿಯ ಬಿಡುಗಡೆ, ನಿರೀಕ್ಷಿತ ಫೀಚರ್ಸ್ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಮಾರ್ಚ್ 1 ರಿಂದ ಸಿಮ್ ಕಾರ್ಡ್ ಇಲ್ಲದೆ Whatsapp ಕಾರ್ಯನಿರ್ವಹಿಸುವುದಿಲ್ಲ! ಇಲ್ಲಿದೆ ಪೂರ್ಣ ಮಾಹಿತಿ
ಜನಪ್ರಿಯ ಪೊಕೊ ಮೊಬೈಲ್ ಕಂಪನಿಯು ಪೊಕೊ X8 ಪ್ರೊ ಮತ್ತು ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್‌ಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ತಯಾರಿ ನಡೆಸಿದೆ. ಪೊಕೊ X8 ಪ್ರೊ ಸರಣಿಯು ಇದೇ ಮಾರ್ಚ್ ತಿಂಗಳ ಮಧ್ಯದಲ್ಲಿ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಡುವ ಸಾಧ್ಯತೆಗಳು ಇವೆ ಎಂದು ಟಿಪ್‌ಸ್ಟಾರ್ ವರದಿಗಳು ಸೂಚಿಸುತ್ತವೆ. ಲಾಂಚ್ ದಿನಾಂಕ ಹಾಗೂ ಬೆಲೆಯ ಬಗ್ಗೆ ಕಂಪನಿಯು ಅಧಿಕೃತವಾಗಿ ಯಾವುದೇ ಮಾಹಿತಿ ಹೊರಹಾಕಿಲ್ಲ. ಅದಾಗ್ಯೂ, ಪೊಕೊ X8 ಪ್ರೊ ಮತ್ತು ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್‌ಗಳು ಮೀಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಮಾರುಕಟ್ಟೆ ಪ್ರವೇಶಿಸಬಹುದು ಎನ್ನಲಾಗಿದೆ.
ಪೊಕೊ X8 ಪ್ರೊ ಮೊಬೈಲ್ 6.59 ಇಂಚಿನ 1.5K 120Hz OLED ಡಿಸ್‌ಪ್ಲೇ ಅನ್ನು ಹೊಂದಿರಲಿದ್ದು ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 8500 ಅಲ್ಟ್ರಾ ಚಿಪ್‌ಸೆಟ್ ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡುವ ನಿರೀಕ್ಷೆಯಿದೆ. ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿರಲಿದೆ. 50 ಮೆಗಾಪಿಕ್ಸೆಲ್ ಸೋನಿ IMX882 ಮುಖ್ಯ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೆಕೆಂಡರಿ ಕ್ಯಾಮೆರಾ ಪಡೆದಿರಲಿದೆ. ಇದರೊಂದಿಗೆ ಮುಂಭಾಗದಲ್ಲಿ 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವ ಸಾಧ್ಯತೆಗಳು ಇವೆ. ಅದೇ ರೀತಿ 100W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಪೊಕೊ X8 ಪ್ರೊ ಮ್ಯಾಕ್ಸ್ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9500s SoC ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ ಇದು 6.83 ಇಂಚಿನ 1.5K OLED ಡಿಸ್‌ಪ್ಲೇ ಅನ್ನು ಪಡೆದಿರುವ ನಿರೀಕ್ಷೆಯಿದೆ. ಇನ್ನು ಈ ಫೋನ್ OIS ನೊಂದಿಗೆ 50 ಮೆಗಾಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಜೊತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಒಳಗೊಂಡಿರಲಿದೆ. ಹಾಗೆಯೇ 100W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 8,500mAh ಬ್ಯಾಟರಿಯನ್ನು ಒಳಗೊಂಡಿರಬಹುದು ಎನ್ನಲಾಗಿದೆ.