ಇಂದಿನಿಂದ Realme 16 5G ಮಾರಾಟ ಪ್ರಾರಂಭ! 60W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌

HIGHLIGHTS

ಇಂದು (ಏಪ್ರಿಲ್‌ 6 ರಂದು) ರಿಯಲ್‌ಮಿ 16 5G ಸೇಲ್‌ ಶುರು

ರಿಯಲ್‌ಮಿಯ ಈ ಮೊಬೈಲ್‌ 120Hz ರಿಫ್ರೆಶ್ ರೇಟ್ ಸೌಲಭ್ಯ ಪಡೆದುಕೊಂಡಿದೆ

ರಿಯಲ್‌ಮಿ 16 5G ಮೊಬೈಲ್‌ 7,000mAh ಬ್ಯಾಟರಿ ಸೌಲಭ್ಯ ಹೊಂದಿದೆ

ಇಂದಿನಿಂದ Realme 16 5G ಮಾರಾಟ ಪ್ರಾರಂಭ! 60W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌

ಜನಪ್ರಿಯ ರಿಯಲ್‌ಮಿ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ಲಾಂಚ್ ಮಾಡಿರುವ Realme 16 5G ಸ್ಮಾರ್ಟ್‌ಫೋನ್ ಮಾರಾಟ ಇಂದು (ಮಾರ್ಚ್‌ 6 ರಂದು) ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದ ಮೂಲಕ ಪ್ರಾರಂಭ ಆಗಲಿದೆ. ಇನ್ನು ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಅನ್ನು ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಇದು 120Hz ವರೆಗಿನ ರಿಫ್ರೆಶ್ ರೇಟ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಹಾಗಾದರೇ ರಿಯಲ್‌ಮಿ 16 5G ಮೊಬೈಲ್‌ನ ಮಾರಾಟ, ಬೆಲೆ, ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಗ್ರಾಹಕರ ಗಮನ ಸೆಳೆದಿರುವ OPPO K13x 5G ಮೊಬೈಲ್‌ ಬೆಲೆಯಲ್ಲಿ ಈಗ ಭರ್ಜರಿ ಇಳಿಕೆ!

Realme 16 5G ಇಂದು ಖರೀದಿಗೆ ಲಭ್ಯ

ರಿಯಲ್‌ಮಿ ಕಂಪನಿಯು ಹೊಸ ರಿಯಲ್‌ಮಿ 16 5G ಫೋನ್‌ ಆಕರ್ಷಕ ಫೀಚರ್ಸ್‌ ಮೂಲಕ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು (ಮಾರ್ಚ್‌ 6 ರಂದು) ಮಧ್ಯಾಹ್ನ 12 ಗಂಟೆಗೆ ಪ್ರಾರಂಭ ಆಗಲಿದೆ. ಇನ್ನು ಇದರ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 36,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಮಾನ್ಸೂನ್ ಬ್ಲೂ ಮತ್ತು ನಾರ್ದರ್ನ್ ಲೈಟ್ಸ್ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಗ್ರಾಹಕರು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಸಬಹುದು.

Realme 16 5G

ರಿಯಲ್‌ಮಿ 16 5G ಫೋನ್‌ ಫೀಚರ್ಸ್‌ ಮಾಹಿತಿ

ನೂತನ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್‌ 6.57 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 4,200 nits ಪೀಕ್‌ ಬ್ರೈಟ್ನೆಸ್‌ ಬೆಂಬಲಿತ 1,080×2,372 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ Realme UI 7.0 ಅನ್ನು ಸಹ ಹೊಂದಿದೆ.

ಹಾಗೆಯೇ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ರಚನೆ ಪಡೆದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 60W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo