Realme 16 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಮುಹೂರ್ತ ನಿಗದಿ! ನಿರೀಕ್ಷಿತ ಫೀಚರ್ಸ್ ಗಮನಿಸಿ
ಏಪ್ರಿಲ್ 2 ರಂದು ರಿಯಲ್‌ಮಿ 16 5G ಭಾರತದಲ್ಲಿ ಬಿಡುಗಡೆ
ರಿಯಲ್‌ಮಿ 16 5G ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಪಡೆದಿರಲಿದೆ
ಮುಂಬರುವ ಈ ಫೋನ್ ಕುರಿತು ಫ್ಲಿಪ್‌ಕಾರ್ಟ್‌ನಲ್ಲಿ ಮೈಕ್ರೋಸೈಟ್ ತೆರೆಯಲಾಗಿದೆ
Realme ಕಂಪನಿಯು ನೂತನವಾಗಿ Realme 16 5G ಮೊಬೈಲ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ನೂತನ ಮೊಬೈಲ್ ಅನ್ನಿ ಇದೇ ಏಪ್ರಿಲ್ ಮೊದಲ ವಾರದಲ್ಲಿ ಅಧಿಕೃತವಾಗಿ ಭಾರತದಲ್ಲಿ ಲಾಂಚ್ ಮಾಡುವುದು ಪಕ್ಕಾ ಆಗಿದೆ. ಲಾಂಚ್ ಕುರಿತು ಫ್ಲಿಪ್‌ಕಾರ್ಟ್ ತಾಣದಲ್ಲಿ ಮೈಕ್ರೋಸೈಟ್ ಕೂಡಾ ತೆರೆಯಲಾಗಿದೆ. ಇನ್ನು ಮುಂಬರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವ ನಿರೀಕ್ಷೆಗಳಿವೆ. ಹಾಗೆಯೇ 7,000mAh ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿಲಿದೆ. ಹಾಗಾದರೆ ರಿಯಲ್‌ಮಿ 16 5G ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
SurveyAlso Read : Thomson ಕಂಪನಿಯ 50 ಇಂಚಿನ ಈ ಸ್ಮಾರ್ಟ್‌ಟಿವಿ ಈಗ ಕಡಿಮೆ ಬೆಲೆಗೆ ಲಭ್ಯ!
Realme 16 5G ಬಿಡುಗಡೆ ದಿನಾಂಕ ನಿಗದಿ
ರಿಯಲ್‌ಮಿ ಸಂಸ್ಥೆಯ ಮುಂಬರುವ ನೂತನ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕುತೂಹಲ ಹೆಚ್ಚಿಸಿದೆ. ಅಂದಹಾಗೆ ಈ ಮೊಬೈಲ್ ಇದೇ ಏಪ್ರಿಲ್ 2 ರಂದು ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಫೋನ್ ಬಿಡುಗಡೆ ಬಳಿಕ ಫ್ಲಿಪ್‌ಕಾರ್ಟ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ ಎಂದು ದೃಢಪಡಿಸಿದೆ. ಹಾಗೆಯೇ ಭಾರತದಲ್ಲಿ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡುವ ನಿರೀಕ್ಷೆಗಳಿವೆ. ಇದು 8GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ.

ರಿಯಲ್‌ಮಿ 16 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್
ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ರಿಯಲ್‌ಮಿ 16 5G ಮೊಬೈಲ್ 6.57 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್ 8GB + 128GB ಮತ್ತು 12GB + 256GB RAM ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆಗಳನ್ನು ಪಡೆದಿರಲಿದೆ ಎಂದು ಹೇಳಲಾಗುತ್ತದೆ. ಇನ್ನು ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರುವ ಸಾಧ್ಯತೆಗಳು ಇವೆ.
ರಿಯಲ್‌ಮಿ 16 5G ಫೋನ್ ಹಿಂಬದಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಎರಡನೇ ಕ್ಯಾಮೆರಾವು 2MP ಸೆನ್ಸಾರ್ ಅನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಅಲ್ಲದೇ ಇದು IP66 + IP68 + IP69 + IP69K ರೇಟಿಂಗ್ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile