ನಾಳೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Realme 16 5G ಮೊಬೈಲ್‌! ಅಚ್ಚರಿ ಮೂಡಿಸಿದ ಫೀಚರ್ಸ್‌

HIGHLIGHTS

ರಿಯಲ್‌ಮಿ 16 5G ಮೊಬೈಲ್‌ ನಾಳೆ (ಏಪ್ರಿಲ್‌ 2 ರಂದು) ಬಿಡುಗಡೆ ಆಗಲಿದೆ

ಎಂಟ್ರಿ ಕೊಡಲಿರುವ ಈ ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಪಡೆದಿರಲಿದೆ

ರಿಯಲ್‌ಮಿ 16 5G ಫೋನ್‌ ಬ್ಲ್ಯಾಕ್‌ ಹಾಗೂ ವೈಟ್‌ ಕಲರ್‌ ಆಯ್ಕೆ ಒಳಗೊಂಡಿರಲಿದೆ

ನಾಳೆ ಗ್ರ್ಯಾಂಡ್‌ ಎಂಟ್ರಿ ಕೊಡಲಿದೆ Realme 16 5G ಮೊಬೈಲ್‌! ಅಚ್ಚರಿ ಮೂಡಿಸಿದ ಫೀಚರ್ಸ್‌

Realme ಕಂಪನಿಯು ತನ್ನ ಹೊಸ Realme 16 5G ಮೊಬೈಲ್‌ ಅನ್ನು ನಾಳೆ (ಏಪ್ರಿಲ್‌ 2 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್‌ ಲಾಂಚ್‌ ಕುರಿತಾಗಿ ಈಗಾಗಲೇ ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಮೈಕ್ರೋಸೈಟ್ ಈಗ ತೆರೆಯಲಾಗಿದ್ದು, ಕೆಲವು ಫೀಚರ್ಸ್‌ ಬಹಿರಂಗವಾಗಿವೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿರುವ ನಿರೀಕ್ಷೆಗಳಿವೆ. ಅಲ್ಲದೇ 7,000mAh ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ ಇದು ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇನ್ನುಳಿದಂತೆ ರಿಯಲ್‌ಮಿ 16 5G ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್‌ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.

Digit.in Survey
✅ Thank you for completing the survey!

Also Read : OnePlus 15R ಮೊಬೈಲ್‌ ಬೆಲೆಯಲ್ಲಿ ದಿಢೀರ್‌ ಏರಿಕೆ! ಖರೀದಿಸುವ ಮುನ್ನ ಹೊಸ ಬೆಲೆ ನೋಡಿ

Realme 16 5G ಲಾಂಚ್‌ ಮಾಹಿತಿ ಇಲ್ಲಿದೆ

Realme ಸಂಸ್ಥೆಯ ಮುಂಬರುವ ಹೊಸ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುವ ನಿರೀಕ್ಷೆಗಳು ಇವೆ. ಅಂದಹಾಗೆ ಈ ಮೊಬೈಲ್‌ ನಾಳೆ (ಏಪ್ರಿಲ್‌ 2 ರಂದು) ಮಧ್ಯಾಹ್ನ 12 ಗಂಟೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುವುದು ಕನ್ಫರ್ಮ್‌ ಆಗಿದೆ. ಮೊಬೈಲ್‌ ಲಾಂಚ್‌ ಬಳಿಕ ಫ್ಲಿಪ್‌ಕಾರ್ಟ್ ತಾಣ ಹಾಗೂ ಕಂಪನಿಯ ಅಧಿಕೃತ ಆನ್‌ಲೈನ್‌ ಸ್ಟೋರ್‌ ಮೂಲಕ ಸೇಲ್‌ ಶುರು ಮಾಡಲಿದೆ ಎಂದು ಕಂಪನಿಯು ದೃಢಪಡಿಸಿದೆ. ಹಾಗೆಯೇ ಭಾರತದಲ್ಲಿ ಈ ಫೋನ್‌ ಬ್ಲ್ಯಾಕ್‌ ಹಾಗೂ ವೈಟ್‌ ಕಲರ್‌ ಆಯ್ಕೆಗಳೊಂದಿಗೆ ಲಗ್ಗೆ ಇಡುವ ನಿರೀಕ್ಷೆಗಳಿವೆ. ಇದು 8GB RAM + 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ.

Realme 16 5G

ರಿಯಲ್‌ಮಿ 16 5G ಮೊಬೈಲ್‌ನ ನಿರೀಕ್ಷಿತ ಫೀಚರ್ಸ್‌

ನೂತನ ರಿಯಲ್‌ಮಿ 16 5G ಮೊಬೈಲ್‌ 6.57 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್‌ 8GB + 128GB ಮತ್ತು 12GB + 256GB RAM ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆಗಳನ್ನು ಪಡೆದಿರಲಿದೆ ಎಂದು ಹೇಳಲಾಗುತ್ತದೆ. ಇನ್ನು ಇದರೊಂದಿಗೆ ಈ ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಪಡೆದಿರುವ ಸಾಧ್ಯತೆಗಳು ಇವೆ.

ರಿಯಲ್‌ಮಿ 16 5G ಸ್ಮಾರ್ಟ್‌ಫೋನ್‌ ಹಿಂಬದಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿರುವ ನಿರೀಕ್ಷೆಗಳು ಇವೆ. ಇನ್ನು ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ದ್ವಿತೀಯ ಕ್ಯಾಮೆರಾವು 2MP ಸೆನ್ಸಾರ್‌ ಅನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ. ಅಲ್ಲದೇ ಇದು IP66 + IP68 + IP69 + IP69K ರೇಟಿಂಗ್‌ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo