Realme ಕಂಪನಿಯು ಈಗಾಗಲೇ ತನ್ನ ಕೆಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಇದೀಗ ರಿಯಲ್‌ಮಿ ಸಂಸ್ಥೆಯು ನೂತನವಾಗಿ Realme 16 5G ಮೊಬೈಲ್ ಅನ್ನು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್ ಸಕಲ ತಯಾರಿ ನಡೆಸುತ್ತಿದೆ. ಈ ಬಗ್ಗೆ ಕಂಪನಿಯು ಅಧಿಕೃತ ಟೀಸರ್ ಮೂಲಕ ತಿಳಿಸಿದೆ. ಇನ್ನು ಮುಂಬರುವ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಒಳಗೊಂಡಿರುವ ನಿರೀಕ್ಷೆಗಳಿವೆ. ಹಾಗೆಯೇ 7,000mAh ಬ್ಯಾಟರಿ ಪವರ್ ಅನ್ನು ಪಡೆದುಕೊಂಡಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿಲಿದೆ. ಹಾಗಾದರೆ ರಿಯಲ್‌ಮಿ 16 5G ಮೊಬೈಲ್‌ನ ಇತರೆ ನಿರೀಕ್ಷಿತ ಲಾಂಚ್ ಹಾಗೂ ಫೀಚರ್ಸ್‌ಗಳ ಕುರಿತು ಮುಂದೆ ತಿಳಿಯೋಣ ಬನ್ನಿರಿ.
Also Read : Jio ಟೆಲಿಕಾಂನ ಅಗ್ಗದ ರೀಚಾರ್ಜ್ ಪ್ಲಾನ್‌ಗಳ ಲಿಸ್ಟ್ ಇಲ್ಲಿದೆ! ಡೇಟಾ ಜೊತೆಗೆ ಬೆಸ್ಟ್ ವ್ಯಾಲಿಡಿಟಿ
ರಿಯಲ್‌ಮಿ ಸಂಸ್ಥೆಯ ಮುಂಬರುವ ಹೊಸ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಗ್ರಾಹಕರಲ್ಲಿ ಹೆಚ್ಚಿನ ನಿರೀಕ್ಷೆಗಳನ್ನು ಮೂಡಿಸಿದೆ. ಈ ಮೊಬೈಲ್ ಅತೀ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಕಂಪನಿಯು ಘೋಷಿಸಿದೆ. ಸಂಸ್ಥೆಯು ಪಕ್ಕಾ ಬಿಡುಗಡೆ ದಿನಾಂಕ ಇನ್ನೂ ಬಹಿರಂಗಪಡಿಸಿಲ್ಲ. ಆದರೆ ಕಂಪನಿಯು ಈ ನೂತನ ಮೊಬೈಲ್ ಫ್ಲಿಪ್‌ಕಾರ್ಟ್ ತಾಣದ ಮೂಲಕ ಮಾರಾಟಕ್ಕೆ ಬರಲಿದೆ ಎಂದು ದೃಢಪಡಿಸಿದೆ. ಹಾಗೆಯೇ ಭಾರತದಲ್ಲಿ ಈ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳೊಂದಿಗೆ ಲಗ್ಗೆ ಇಡುವ ನಿರೀಕ್ಷೆಗಳಿವೆ. ಇದು 8GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿರುವ ಸಾಧ್ಯತೆಗಳು ಇವೆ.
ಮುಂಬರುವ ಹೊಸ ರಿಯಲ್‌ಮಿ 16 5G ಮೊಬೈಲ್ 6.57 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿರಲಿದೆ. ಹಾಗೆಯೇ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಪಡೆದಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಮೊಬೈಲ್ 8GB + 128GB ಮತ್ತು 12GB + 256GB RAM ಸ್ಟೋರೇಜ್ ವೇರಿಯಂಟ್‌ಗಳ ಆಯ್ಕೆಗಳನ್ನು ಪಡೆದಿರಲಿದೆ ಎಂದು ಹೇಳಲಾಗುತ್ತದೆ. ಇನ್ನು ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್ ಪ್ರೊಸೆಸರ್ ಪವರ್ ಪಡೆದಿರುವ ಸಾಧ್ಯತೆಗಳು ಇವೆ.
ರಿಯಲ್‌ಮಿ 16 5G ಮೊಬೈಲ್ ಹಿಂಬದಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿರಲಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಎರಡನೇ ಕ್ಯಾಮೆರಾವು 2MP ಸೆನ್ಸಾರ್ ಅನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಇನ್ನು ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ. ಅಲ್ಲದೇ ಇದು IP66 + IP68 + IP69 + IP69K ರೇಟಿಂಗ್ ಸೌಲಭ್ಯ ಸಹ ಪಡೆದಿರುವ ಸಾಧ್ಯತೆಗಳು ಇವೆ.