7,000mAh ಬ್ಯಾಟರಿಯೊಂದಿಗೆ Realme 16 5G ಮೊಬೈಲ್‌ ಲಾಂಚ್‌! ಬೆಲೆ ಹಾಗೂ ಫೀಚರ್ಸ್‌

HIGHLIGHTS

ರಿಯಲ್‌ಮಿ ಈ ಹೊಸ ಮೊಬೈಲ್‌ 60W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಪಡೆದಿದೆ

ಈ ನೂತನ ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 6400 ಟರ್ಬೊ ಪ್ರೊಸೆಸರ್‌ ಹೊಂದಿದೆ

ರಿಯಲ್‌ಮಿ 16 ಮೊಬೈಲ್‌ ಏರ್ ಬ್ಲ್ಯಾಕ್ ಮತ್ತು ಏರ್ ವೈಟ್ ಕಲರ್‌ ಆಯ್ಕೆ ಪಡೆದಿದೆ

7,000mAh ಬ್ಯಾಟರಿಯೊಂದಿಗೆ Realme 16 5G ಮೊಬೈಲ್‌ ಲಾಂಚ್‌! ಬೆಲೆ ಹಾಗೂ ಫೀಚರ್ಸ್‌

Realme ಕಂಪನಿಯು ತನ್ನ ಬಹುನಿರೀಕ್ಷಿತ Realme 16 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಏಪ್ರಿಲ್‌ 2 ರಂದು) ದೇಶೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಸಪೋರ್ಟ್‌ ಒಳಗೊಂಡಿರುವ ಜೊತೆಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ರಚನೆ ಪಡೆದುಕೊಂಡಿದ. ಅಲ್ಲದೇ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ ಏರ್ ಬ್ಲ್ಯಾಕ್ ಮತ್ತು ಏರ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರಲಿದೆ. ಹಾಗಾದರೆ ರಿಯಲ್‌ಮಿ 16 5G ಮೊಬೈಲ್‌ನ ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅಂತೂ ಲಾಂಚ್‌ ಆಯ್ತು Vivo V70 FE ಸ್ಮಾರ್ಟ್‌ಫೋನ್‌! 200MP ಕ್ಯಾಮೆರಾ ಹೈಲೈಟ್

Realme 16 5G ಬೆಲೆ ಹಾಗೂ ಲಭ್ಯತೆ

ದೇಶಿಯ ಮೊಬೈಲ್‌ ಮಾರುಕಟ್ಟೆ ಪ್ರವೇಶಿಸಿರುವ ರಿಯಲ್‌ಮಿ 16 5G ಸ್ಮಾರ್ಟ್‌ಫೋನ್‌ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳೊಂದಿಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದೆ. ಅದೇ ರೀತಿ 12GB + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 36,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಮಾನ್ಸೂನ್ ಬ್ಲೂ ಮತ್ತು ನಾರ್ದರ್ನ್ ಲೈಟ್ಸ್ ಪರ್ಪಲ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 5 ರಿಂದ ಮಾರಾಟಕ್ಕೆ ಬರಲಿದೆ. ಅಂದಹಾಗೆ ಪ್ರಸ್ತುತ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ವೆನ್‌ಸೈಟ್‌ ಮೂಲಕ pre-order ಮಾಡಲು ಲಭ್ಯವಿದೆ.

Realme 16 5G

ರಿಯಲ್‌ಮಿ 16 5G ಮೊಬೈಲ್‌ ಫೀಚರ್ಸ್‌ ಹೀಗಿವೆ

ನೂತನ ರಿಯಲ್‌ಮಿ 16 5G ಮೊಬೈಲ್‌ 6.57 ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 4,200 nits ಪೀಕ್‌ ಬ್ರೈಟ್ನೆಸ್‌ ಬೆಂಬಲಿತ 1,080×2,372 ಪಿಕ್ಸೆಲ್‌ ರೆಸಲ್ಯೂಶನ್‌ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಟರ್ಬೊ ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ Realme UI 7.0 ಅನ್ನು ಸಹ ಪಡೆದುಕೊಂಡಿದೆ.

ಹಾಗೆಯೇ ರಿಯಲ್‌ಮಿ 16 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ರಚನೆ ಪಡೆದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಫೋನ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 60W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo