Realme 16 Pro 5G Harry Potter Edition Specifications
ರಿಯಲ್‌ಮಿ ಮೊಬೈಲ್ ಸಂಸ್ಥೆಯು ಹೊಸದಾಗಿ Realme 16 Pro 5G Harry Potter Edition ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ನೂತನ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಮ್ಯಾಕ್ಸ್ 5G ಚಿಪ್‌ಸೆಟ್ ಪ್ರೊಸೆಸರ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 144Hz ರಿಫ್ರೆಶ್ ರೇಟ್‌ನ ಡಿಸ್‌ಪ್ಲೇ ಹಾಗೂ 7,000mAh ಸಾಮರ್ಥ್ಯದ ಟೈಟಾನ್ ಬ್ಯಾಟರಿ ಸೌಲಭ್ಯ ಪಡೆದಿರುವುದು ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಿದೆ. ಹಾಗೆಯೇ ಮುಂಭಾಗದಲ್ಲಿ ಇದು 200MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮ್ಯಾಜಿಕ್ ಬ್ರೌನ್ ಕಲರ್ ಆಯ್ಕೆಯನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶ ಪಡೆದಿದೆ. ಹಾಗಾದರೇ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್ ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ 625 ರೂ.ಗಳ ಪ್ಲಾನ್‌ನಲ್ಲಿ ಜಬರ್ದಸ್ತ್ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ
ರಿಯಲ್‌ಮಿ ಮೊಬೈಲ್ ಸಂಸ್ಥೆಯ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್ ಮೊಬೈಲ್ ಆಕರ್ಷಕ ಡಿಸೈನ್ ಹಾಗೂ ಫೀಚರ್ಸ್‌ಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ನ ಆರಂಭಿಕ 12GB RAM + 256GB ಸ್ಟೋರೇಜ್ ವೇರಿಯಂಟ್ 62,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್ ಮ್ಯಾಜಿಕ್ ಬ್ರೌನ್ ಕಲರ್ ಆಯ್ಕೆ ಪಡೆದುಕೊಂಡಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಇದೇ ಸಪ್ಟೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.
ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 1,400 ನಿಟ್ಸ್ ಬ್ರೈಟ್ನೆಸ್ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್ 1,272×2,772 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಮ್ಯಾಕ್ಸ್ 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP66, IP68, IP69 ಮತ್ತು IP69K ರೇಟಿಂಗ್ ಪಡೆದಿದೆ.
ಹಾಗೆಯೇ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 200MP ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್ ಹೊಂದಿರುವ ಜೊತೆಗೆ 80W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.