ಇಂದಿನಿಂದ Realme 16 Pro 5G Harry Potter Edition ಮಾರಾಟ ಪ್ರಾರಂಭ; ಬೆಲೆ ನೋಡಿ

ಇಂದಿನಿಂದ Realme 16 Pro 5G Harry Potter Edition ಮಾರಾಟ ಪ್ರಾರಂಭ; ಬೆಲೆ ನೋಡಿ

ರಿಯಲ್‌ಮಿ ಮೊಬೈಲ್‌ ಕಂಪನಿಯ ನೂತನ Realme 16 Pro 5G Harry Potter Edition ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಫೋನ್‌ ಇಂದು (ಸೆಪ್ಟೆಂಬರ್ 22 ರಂದು) ಭಾರತೀಯ ಮಾರುಕಟ್ಟೆಯಲ್ಲಿ ಫ್ಲಿಪ್‌ಕಾರ್ಟ್‌ ಮೂಲಕ ಸೇಲ್‌ ಪ್ರಾರಂಭ ಮಾಡಲಿದೆ. ಈ ನೂತನ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಮ್ಯಾಕ್ಸ್ 5G ಚಿಪ್‌ಸೆಟ್‌ ಸೌಲಭ್ಯದ ಜೊತೆಗೆ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 144Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮ್ಯಾಜಿಕ್ ಬ್ರೌನ್ ಕಲರ್‌ ಆಯ್ಕೆಯನ್ನು ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಮೊಬೈಲ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Vi ಟೆಲಿಕಾಂನ 625 ರೂ.ಗಳ ಪ್ಲಾನ್‌ನಲ್ಲಿ ಜಬರ್ದಸ್ತ್‌ ಡೇಟಾ ಜೊತೆಗೆ 60 ದಿನಗಳ ವ್ಯಾಲಿಡಿಟಿ

ಇಂದು Realme ಹ್ಯಾರಿ ಪಾಟರ್ ಎಡಿಷನ್‌ ಮೊಬೈಲ್‌ ಸೇಲ್‌

ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹೊಸ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಮೊಬೈಲ್‌ ಇಂದು (ಸೆಪ್ಟೆಂಬರ್ 22 ರಂದು) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಸೇಲ್‌ ಶುರು ಮಾಡಲಿದೆ. ಈ ಮೊಬೈಲ್‌ನ ಆರಂಭಿಕ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 62,999 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ ಮ್ಯಾಜಿಕ್ ಬ್ರೌನ್ ಕಲರ್‌ ಆಯ್ಕೆ ಪಡೆದುಕೊಂಡಿದೆ.

Realme 16 Pro 5G Harry Potter Edition

ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಸ್ಮಾರ್ಟ್‌ಫೋನ್‌ 6.78 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 1,400 ನಿಟ್ಸ್ ಬ್ರೈಟ್ನೆಸ್‌ ಸೌಲಭ್ಯ ಅನ್ನು ಪಡೆದಿದೆ. ಇದರ ಸ್ಕ್ರೀನ್‌ 1,272×2,772 ಪಿಕ್ಸೆಲ್‌ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಮ್ಯಾಕ್ಸ್ 5G ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಇದು ಆಂಡ್ರಾಯ್ಡ್‌ 16 ಆಪರೇಟಿಂಗ್ ಸಿಸ್ಟಮ್‌ ಸಪೋರ್ಟ್ ಪಡೆದಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP66, IP68, IP69 ಮತ್ತು IP69K ರೇಟಿಂಗ್‌ ಪಡೆದಿದೆ.

ಹಾಗೆಯೇ ರಿಯಲ್‌ಮಿ 16 ಪ್ರೊ 5G ಹ್ಯಾರಿ ಪಾಟರ್ ಎಡಿಷನ್‌ ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 200MP ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50MP ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 7,000mAh ಬ್ಯಾಟರಿ ಸಪೋರ್ಟ್‌ ಹೊಂದಿರುವ ಜೊತೆಗೆ 80W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile