ಇಂದಿನಿಂದ Realme 16T 5G ಸ್ಮಾರ್ಟ್‌ಫೋನ್‌ ಮಾರಾಟ ಶುರು! 8,000mAh ಬ್ಯಾಟರಿ ಹೈಲೈಟ್‌

HIGHLIGHTS

ಇಂದಿನಿಂದ ರಿಯಲ್‌ಮಿ 16T 5G ಮೊಬೈಲ್‌ ಖರೀದಿಗೆ ಲಭ್ಯ

ರಿಯಲ್‌ಮಿಯ ಈ ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

ರಿಯಲ್‌ಮಿ 16T 5G ಫೋನ್‌ 8,000mAh ಬ್ಯಾಟರಿ ಆಯ್ಕೆಯನ್ನು ಪಡೆದುಕೊಂಡಿದೆ

ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ Realme 16T 5G ಸ್ಮಾರ್ಟ್‌ಫೋನ್‌ ಇಂದು (ಮೇ 27 ರಂದು) ದೇಶೀಯ ಮಾರುಕಟ್ಟೆಯಲ್ಲಿ ಮೊದಲ ಮಾರಾಟ ಪ್ರಾರಂಭ ಮಾಡಲಿದೆ. ಈ ಮೀಡ್‌ರೇಂಜ್ ಮಾದರಿಯ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 SoC ಚಿಪ್‌ಸೆಟ್‌ ಪ್ರೊಸೆಸರ್‌ ಸಪೋರ್ಟ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಮೊಬೈಲ್‌ 50MP ಸೆನ್ಸಾರ್‌ನ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿರುವ ಜೊತೆಗೆ ಈ ಮೊಬೈಲ್‌ ಸ್ಟಾರ್‌ಲೈಟ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಲೈಟ್ ರೆಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೇ ರಿಯಲ್‌ಮಿ 16T 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : POCO M7 Plus ಮೊಬೈಲ್‌ ಬೆಲೆಯಲ್ಲಿ ಇದೀಗ ಭಾರೀ ಇಳಿಕೆ! 50MP ಕ್ಯಾಮೆರಾ ಸೆನ್ಸಾರ್‌

Realme 16T 5G ಮೊಬೈಲ್‌ ಸೇಲ್‌ ಪ್ರಾರಂಭ

ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ 16T 5G ಮೊಬೈಲ್‌ ಇಂದು (ಮೇ 27 ರಂದು) ಫ್ಲಿಪ್‌ಕಾರ್ಟ್‌ ಮೂಲಕ ಸೇಲ್ ಶುರು ಮಾಡಿದೆ. ಈ ಫೋನ್ ಎರಡು ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ 29,999 ರೂ.ಗಳ ಬೆಲೆಯನ್ನು ಹೊಂದಿದೆ. ಹಾಗೆಯೇ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 31,999 ರೂ.ಗಳು ಆಗಿದೆ. ಹಾಗೆಯೇ 8GB + 256GB ವೇರಿಯಂಟ್‌ ಬೆಲೆಯು 34,999 ರೂ.ಗಳು ಆಗಿದೆ. ಇನ್ನು ಈ ಫೋನ್‌ ಸ್ಟಾರ್‌ಲೈಟ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಲೈಟ್ ರೆಡ್ ಕಲರ್‌ ಆಯ್ಕೆಗಳಲ್ಲಿ ಲಭ್ಯ.

ರಿಯಲ್‌ಮಿ 16T 5G ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ 16T 5G ಮೊಬೈಲ್‌ 6.8 ಇಂಚಿನ LCD ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ 144Hz ರಿಫ್ರೆಶ್ ರೇಟ್‌ ಹಾಗೂ 1,200 nits ಬ್ರೈಟ್‌ನೆಸ್ ಸಪೋರ್ಟ್‌ ಪಡೆದುಕೊಂಡಿದೆ. ಹಾಗೆಯೇ ಬ್ರೈಟ್‌ನೆಸ್ DC ಡಿಮ್ಮಿಂಗ್, ಡಾರ್ಕ್ ಮೋಡ್ ಆಯ್ಕೆಗಳನ್ನು ಒಳಗೊಂಡಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ 6GB + 128GB, 8GB + 128GB ಹಾಗೂ 8GB + 256GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಅಲ್ಲದೇ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ UI 7 ಸಹ ಪಡೆದಿದೆ.

ರಿಯಲ್‌ಮಿ 16T 5G ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಹಾಗೂ 6.5W ರಿವರ್ಸ್ ಚಾರ್ಜಿಂಗ್‌ ಬೆಂಬಲ ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :