Realme 16x 5G with 7000mah battery Launched in India Price and Specifications
ರಿಯಲ್‌ಮಿ ಕಂಪನಿಯ ನೂತನ Realme 16x 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್ ಇಂದು (ಆಗಷ್ಟ್ 13 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಸೇಲ್ ಪ್ರಾರಂಭ ಮಾಡಲಿದೆ. ಈ ನೂತನ ಸ್ಮಾರ್ಟ್‌ಫೋನ್ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಜೊತೆಗೆ ಕ್ರಮವಾಗಿ 7,000mAh ಬ್ಯಾಟರಿ ಬ್ಯಾಕ್‌ಅಪ್ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್ 50MP ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಅಲ್ಲದೇ ಈ ಫೋನ್ ಎಂಡ್ಯೂರೆನ್ಸ್ ಬ್ರೌನ್ ಮತ್ತು ಗ್ಲೋರಿ ವೈಟ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ 16x 5G ಮೊಬೈಲ್ ಸೇಲ್, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Google Pixel 11 Pro Fold ಬಿಡುಗಡೆ; ಮಡಚಬಹುದಾದ ಈ ಫೋನ್‌ನಲ್ಲಿ ಟ್ರಿಪಲ್ ಕ್ಯಾಮೆರಾ ಸೌಲಭ್ಯ!
ದೇಶೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪನಿಯ ರಿಯಲ್‌ಮಿ 16x 5G ಮೊಬೈಲ್ ಇಂದು (ಆಗಷ್ಟ್ 13 ರಿಂದ) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಗೆ ಲಭ್ಯವಾಗಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ 25,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 6GB + 128GB ಸ್ಟೋರೇಜ್ ವೇರಿಯಂಟ್ 27,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು 6GB + 256GB ಸ್ಟೋರೇಜ್ ವೇರಿಯಂಟ್ 30,999 ರೂ.ಗಳ ಪ್ರೈಸ್‌ಟ್ಯಾಗ್ ಅನ್ನು ಪಡೆದುಕೊಂಡಿದೆ. ಅಂದಹಾಗೆ ಈ ಮೊಬೈಲ್ ಎಂಡ್ಯೂರೆನ್ಸ್ ಬ್ರೌನ್ ಮತ್ತು ಗ್ಲೋರಿ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮತ್ತು ರಿಯಲ್‌ಮಿ ವೆಬ್‌ಸೈಟ್ ಖರೀದಿಗೆ ಲಭ್ಯ.
ರಿಯಲ್‌ಮಿ 16x 5G ಮೊಬೈಲ್ 6.8 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 128GB, 6GB + 256GB ಹಾಗೂ 6GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ Realme UI 7.0 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ರಿಯಲ್‌ಮಿ 16x 5G ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.