Realme 16x 5G With Dimensity 6300 SoC Launched in India Check Price
ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾಗಿರುವ ರಿಯಲ್‌ಮಿ ಸಂಸ್ಥೆಯು ಹೊಸದಾಗಿ Realme 16x 5G ಸ್ಮಾರ್ಟ್‌ಫೋನ್ ಅನ್ನು ಇಂದು (ಆಗಷ್ಟ್ 12 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೀಡ್‌ರೇಂಜ್‌ನಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪಡೆದುಕೊಂಡಿದೆ. ಅಲ್ಲದೇ ಈ ಫೋನ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್ ಎಂಡ್ಯೂರೆನ್ಸ್ ಬ್ರೌನ್ ಮತ್ತು ಗ್ಲೋರಿ ವೈಟ್ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ರಿಯಲ್‌ಮಿ 16x 5G ಸ್ಮಾರ್ಟ್‌ಫೋನ್ ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 9,000mAh ಬ್ಯಾಟರಿ ಇರುವ OnePlus Nord 6 ಮೊಬೈಲ್ ಈಗ ಡಿಸ್ಕೌಂಟ್ ಬೆಲೆಗೆ ಲಭ್ಯ!
ರಿಯಲ್‌ಮಿ ಕಂಪನಿಯ ರಿಯಲ್‌ಮಿ 16x 5G ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ 25,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 6GB + 128GB ಸ್ಟೋರೇಜ್ ವೇರಿಯಂಟ್ 27,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು 6GB + 256GB ಸ್ಟೋರೇಜ್ ವೇರಿಯಂಟ್ 30,999 ರೂ.ಗಳ ಪ್ರೈಸ್‌ಟ್ಯಾಗ್ ಅನ್ನು ಪಡೆದುಕೊಂಡಿದೆ. ಈ ಫೋನ್ ಎಂಡ್ಯೂರೆನ್ಸ್ ಬ್ರೌನ್ ಮತ್ತು ಗ್ಲೋರಿ ವೈಟ್ ಕಲರ್ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಇನ್ನು ಈ ಫೋನ್ ಆಗಸ್ಟ್ 13 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ವೆಬ್‌ಸೈಟ್ ಮೂಲಕ ಮಾರಾಟಕ್ಕೆ ಬರಲಿದೆ.
ರಿಯಲ್‌ಮಿ 16x 5G ಮೊಬೈಲ್ 6.8 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 144Hz ರಿಫ್ರೆಶ್ ರೇಟ್ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 128GB, 6GB + 256GB ಹಾಗೂ 6GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್ 16 ಆಧಾರಿತ Realme UI 7.0 ನೊಂದಿಗೆ ಕಾರ್ಯನಿರ್ವಹಿಸಲಿದೆ.
ಹಾಗೆಯೇ ರಿಯಲ್‌ಮಿ 16x 5G ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಜೊತೆಗೆ 45W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.