ಹೊಸ Realme C100i ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯ; ಅಗ್ಗದ ಪ್ರೈಸ್‌ಟ್ಯಾಗ್‌

HIGHLIGHTS

ಹೊಸ ರಿಯಲ್‌ಮಿ C100i ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ

ರಿಯಲ್‌ಮಿ C100i ಸ್ಮಾರ್ಟ್‌ಫೋನ್ 6,500mAh ಬ್ಯಾಟರಿ ಪಡೆದಿದೆ

ಈ ಮೊಬೈಲ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಕೈಲೈನ್ ಸಿಲ್ವರ್ ಕಲರ್‌ ಆಯ್ಕೆಯಲ್ಲಿ ಲಭ್ಯ

ರಿಯಲ್‌ಮಿ ಕಂಪನಿಯ ಹೊಸದಾಗಿ ಬಿಡುಗಡೆ ಮಾಡಿರುವ Realme C100i ಫೋನ್‌ ಎಂಟ್ರಿ ಲೆವೆಲ್‌ ಬೆಲೆ ಹಾಗೂ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಆಗಷ್ಟ್‌ 27 ರಿಂದ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಸೇಲ್‌ ಪ್ರಾರಂಭ ಮಾಡಿದೆ. ಈ ನೂತನ ಮೊಬೈಲ್‌ ಆಕ್ಟಾ-ಕೋರ್ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಜೊತೆಗೆ 6,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನು ಹಾಗೆಯೇ ಈ ಮೊಬೈಲ್‌ 8MP ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಕೈಲೈನ್ ಸಿಲ್ವರ್ ಬಣ್ಣಗಳ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ C100i ಸ್ಮಾರ್ಟ್‌ಫೋನ್‌ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಸೈಲೆಂಟ್‌ ಆಗಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Vivo Y31T 5G ಸ್ಮಾರ್ಟ್‌ಫೋನ್‌! ಬಿಗ್ ಬ್ಯಾಟರಿ

Realme C100i ಖರೀದಿಗೆ ಲಭ್ಯ

ಐಕ್ಯೂ ಕಂಪನಿಯ ರಿಯಲ್‌ಮಿ C100i ಮೊಬೈಲ್‌ ಆಗಷ್ಟ್‌ 27 ರಿಂದ ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್‌ ವೇರಿಯಂಟ್‌ 14,999 ರೂ.ಗಳ ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಸ್ಕೈಲೈನ್ ಸಿಲ್ವರ್ ಆಯ್ಕೆಯಲ್ಲಿ ಲಭ್ಯ. ಪ್ರಸ್ತುತ ಭಾರತದಲ್ಲಿ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟದಲ್ಲಿದೆ.

ರಿಯಲ್‌ಮಿ C100i ಸ್ಮಾರ್ಟ್‌ಫೋನ್‌ ಫೀಚರ್ಸ್‌

ರಿಯಲ್‌ಮಿ C100i ಮೊಬೈಲ್‌ 6.75 ಇಂಚಿನ HD+ LCD ಟಚ್‌ಸ್ಕ್ರೀನ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 900 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ-ಕೋರ್ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಈ ಫೋನ್‌ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ ಫೋನ್ IP64 ರೇಟಿಂಗ್‌ ಸೌಲಭ್ಯ ಹೊಂದಿದೆ.

ಹಾಗೆಯೇ ರಿಯಲ್‌ಮಿ C100i ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಸಿಂಗಲ್ ಕ್ಯಾಮೆರಾ ರಚನೆ ಹೊಂದಿದ್ದು ಅದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದೆ. ಹಾಗೆಯೇ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಪ್ರಮುಖ ಹೈಲೈಟ್‌ಯೆಂದರೆ ಇದು 6,500mAh ಬ್ಯಾಟರಿ ಸಪೋರ್ಟ್‌ ಜೊತೆಗೆ 15W ವೈರ್ಡ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 5, ಬ್ಲೂಟೂತ್ 5.2, USB ಟೈಪ್-C ಪೋರ್ಟ್, 3.5mm ಆಡಿಯೋ ಜ್ಯಾಕ್ ಸೇರಿವೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :