ಅಗ್ಗದ ಬೆಲೆಯಲ್ಲಿ Realme C100x ಸ್ಮಾರ್ಟ್‌ಫೋನ್‌ ಬಿಡುಗಡೆ! 8,000mAh ಬ್ಯಾಟರಿ ಸಪೋರ್ಟ್

HIGHLIGHTS

ರಿಯಲ್‌ಮಿ ಸಂಸ್ಥೆಯ ಈ ಫೋನ್‌ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ

ಈ ಹೊಸ ಮೊಬೈಲ್‌ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದಿದೆ

ರಿಯಲ್‌ಮಿ ಕಂಪನಿಯ ಈ ಫೋನ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ

ಪ್ರಮುಖ ಮೊಬೈಲ್‌ ಬ್ರಾಂಡ್‌ಗಳ ಪೈಕಿ ಒಂದಾಗಿರುವ ರಿಯಲ್‌ಮಿ ಸಂಸ್ಥೆಯು ಹೊಸದಾಗಿ Realme C100x ಸ್ಮಾರ್ಟ್‌ಫೋನ್‌ ಅನ್ನು ಇಂದು (ಜುಲೈ 16 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಗ್ಗದ ರೇಂಜ್‌ನಲ್ಲಿ ಲಗ್ಗೆ ಇಟ್ಟಿರುವ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ 8,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಹಾಗೆಯೇ ಇದು 50MP ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಈ ಫೋನ್‌ Deepblue Tides ಮತ್ತು Golden Coast ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಹಾಗಾದರೇ ರಿಯಲ್‌ಮಿ C100x ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Jio ಟೆಲಿಕಾಂನ ಈ ಒಂದು ಪ್ಲಾನ್‌ನಲ್ಲಿ 98 ದಿನಗಳ ವ್ಯಾಲಿಡಿಟಿ ಜೊತೆಗೆ 196GB ಡೇಟಾ ಸೌಲಭ್ಯ

Realme C100x ಫೋನ್‌ ಬೆಲೆ ಹಾಗೂ ಲಭ್ಯತೆ

ರಿಯಲ್‌ಮಿ ಕಂಪನಿಯ ರಿಯಲ್‌ಮಿ C100x ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ಈ ಮೊಬೈಲ್‌ನ 4GB + 64GB RAM ಸ್ಟೋರೇಜ್‌ ವೇರಿಯಂಟ್‌ 14,499 ರೂ.ಗಳ ಬೆಲೆಯನ್ನು ಹೊಂದಿದೆ. ಈ ಫೋನ್‌ Deepblue Tides ಮತ್ತು Golden Coast ಕಲರ್‌ ಆಯ್ಕೆಗಳನ್ನು ಒಳಗೊಂಡು ಮಾರುಕಟ್ಟೆಗೆ ಪ್ರವೇಶಿಸಿದೆ. ಇನ್ನು ಈ ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಹಾಗೂ ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಖರೀದಿಗೆ ಲಭ್ಯವಿದೆ.

ರಿಯಲ್‌ಮಿ C100x ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ C100x ಮೊಬೈಲ್‌ 6.8 ಇಂಚಿನ HD+ LCD ಪ್ಯಾನೆಲ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 120Hz ರಿಫ್ರೆಶ್ ರೇಟ್‌ ಜೊತೆಗೆ 900 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ Unisoc T7250 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ Realme UI 7.0 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ರಿಯಲ್‌ಮಿ C100x ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 45W SuperVOOC ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :