ಕಡಿಮೆ ಬೆಲೆಯಲ್ಲಿ Realme C83 5G ಸ್ಮಾರ್ಟ್‌ಫೋನ್‌ ಲಾಂಚ್‌! 7,000mAh ಬ್ಯಾಟರಿ ಪ್ರಮುಖ ಹೈಲೈಟ್‌

HIGHLIGHTS

ರಿಯಲ್‌ಮಿ C83 5G ಮೊಬೈಲ್‌ ಮಾರ್ಚ್‌ 7 ರಿಂದ ಭಾರತದಲ್ಲಿ ಸೇಲ್ ಆರಂಭಿಸಲಿದೆ

ರಿಯಲ್‌ಮಿ C83 5G ಫೋನ್‌ ರಿಫ್ರೆಶ್ ರೇಟ್‌ನೊಂದಿಗೆ LCD ಡಿಸ್‌ಪ್ಲೇ ಅನ್ನು ಹೊಂದಿದೆ

ರಿಯಲ್‌ಮಿ C83 5G ಬ್ಲೂಮಿಂಗ್ ಪರ್ಪಲ್ ಮತ್ತು ಸ್ಪ್ರೌಟಿಂಗ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯ

ರಿಯಲ್‌ಮಿ ಕಂಪನಿಯ ಬಹುನಿರೀಕ್ಷಿತ Realme C83 5G ಸ್ಮಾರ್ಟ್‌ಫೋನ್‌ ಇಂದು (ಮಾರ್ಚ್ 6 ರಂದು) ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಬಿಡುಗಡೆ ಆಗಿದೆ. ಈ ಮೊಬೈಲ್‌ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯವನ್ನು ಹೊಂದಿರುವ ಜೊತೆಗೆ ಈ ಮೊಬೈಲ್‌ 7,000mAh ಬ್ಯಾಕ್‌ಅಪ್‌ ಒದಗಿಸುವ ಬ್ಯಾಟರಿ ಸಪೋರ್ಟ್‌ ಪಡೆದಿದೆ. ಅಲ್ಲದೇ ಇದು 13MP AI ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಫೋನ್ ಬ್ಲೂಮಿಂಗ್ ಪರ್ಪಲ್ ಮತ್ತು ಸ್ಪ್ರೌಟಿಂಗ್ ಗ್ರೀನ್ ಕಲರ್‌ ಆಯ್ಕೆಗಳನ್ನು ಗ್ರಾಹಕರಿಗೆ ನೀಡಿದೆ. ಇನ್ನು ರಿಯಲ್‌ಮಿ C83 5G ಮೊಬೈಲ್‌ ಬೆಲೆ, ಫೀಚರ್ಸ್‌ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : Amazon Electronics Premier league 2026: ಈ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌

Realme C83 5G ಮೊಬೈಲ್‌ ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ಸಂಸ್ಥೆಯ ನೂತನ ರಿಯಲ್‌ಮಿ C83 5G ಮೊಬೈಲ್‌ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್ ಆವೃತ್ತಿಯ ಬೆಲೆ 13,499 ರೂಗಳು ಆಗಿದೆ. ಇದರ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 14,499 ರೂಗಳು ಆಗಿದೆ. ಇನ್ನು ಇದರ 6GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 17,499 ರೂಗಳು ಆಗಿದೆ. ಈ ನೂತನ ಮೊಬೈಲ್‌ ಇದೇ ಮಾರ್ಚ್ 7 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ. ಅಂದಹಾಗೆ ಈ ಫೋನ್‌ ಬ್ಲೂಮಿಂಗ್ ಪರ್ಪಲ್ ಮತ್ತು ಸ್ಪ್ರೌಟಿಂಗ್ ಗ್ರೀನ್ ಕಲರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

ರಿಯಲ್‌ಮಿ C83 5G ಸ್ಮಾರ್ಟ್‌ಫೋನ್‌ ಫೀಚರ್ಸ್‌

ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರಿಯಲ್‌ಮಿ C83 5G ಮೊಬೈಲ್ 6.8 ಇಂಚಿನ HD+ LCD ಡಿಸ್‌ಪ್ಲೇ ಪಡೆದಿದ್ದು ಇದರ ಸ್ಕ್ರೀನ್‌ 720×1,570 ಪಿಕ್ಸಲ್‌ ರೆಸಲ್ಯೂಶನನ್ನು ಪಡೆದಿದೆ. ಹಾಗೆಯೇ 144Hz ವರೆಗೆ ರಿಫ್ರೆಶ್ ರೇಟ್ ಹೊಂದಿದ್ದು 900 nits ಬ್ರೈಟ್ನೆಸ್‌ ಸೌಲಭ್ಯ ನೀಡಲಾಗಿದೆ. ಈ ಫೋನ್ MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ ಜೊತೆಗೆ ಇದು ಆಂಡ್ರಾಯ್ಡ್ 16 ಅನ್ನು Realme UI 7.0 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಎಸ್‌ಡಿ ಕಾರ್ಡ್‌ ಬೆಂಬಲದ ಮೂಲಕ ಸ್ಟೋರೇಜ್‌ ಅನ್ನು 2TB ವರೆಗೆ ವಿಸ್ತರಿಸಬಹುದು

ರಿಯಲ್‌ಮಿ C83 5G ಮೊಬೈಲ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 13MP AI ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್‌ ಬಲ ಪಡೆದಿದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 5 ಮೆಗಾಪಿಕ್ಸಲ್ ಕ್ಯಾಮೆರಾ ಒದಗಿಸಲಾಗಿದೆ. ಇನ್ನು ಈ ಮೊಬೈಲ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರುವ ಜೊತೆಗೆ 15W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲವನ್ನು ಸಹ ಹೊಂದಿದೆ. ಅಲ್ಲದೇ ಇದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP64 ರೇಟಿಂಗ್ ಅನ್ನು ಹೊಂದಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :