256GB ಸ್ಟೋರೇಜ್ ಸೌಲಭ್ಯದ Realme GT 7 ಮೊಬೈಲ್ ಬೆಲೆಯಲ್ಲಿ ಭಾರೀ ಕಡಿತ!
ರಿಯಲ್‌ಮಿ GT 7 ಫೋನ್ Flipkart ಪ್ಲಾಟ್‌ಫಾರ್ಮ್‌ನಲ್ಲಿ ಖರೀದಿಗೆ ಲಭ್ಯ
ರಿಯಲ್‌ಮಿ ಕಂಪನಿಯ ಈ ಫೋನ್ 7,000mAh ಬ್ಯಾಟರಿ ಪಡೆದುಕೊಂಡಿದೆ
ಈ ಮೊಬೈಲ್ ಬ್ಲೂ, ಬ್ಲಾಕ್ ಮತ್ತು ರೇಸಿಂಗ್ ಯೆಲ್ಲೋ ಕಲರ್ ಆಯ್ಕೆ ಹೊಂದಿದೆ
ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ Realme GT 7 ಮೊಬೈಲ್ ಈಗ ಮತ್ತೆ ಸದ್ದು ಮಾಡಿದೆ. ಏಕೆಂದರೆ ಪ್ರಸ್ತುತ ರಿಯಲ್‌ಮಿ GT 7 ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ ಆಕ್ಟಾ ಕೋರ್ Mediatek Dimensity 8400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ 7,000mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಹೊಂದಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ GT 7 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : 7,200mAh ಬ್ಯಾಟರಿ ಇರುವ iQOO Z11x 5G ಮೊಬೈಲ್ ಈಗ ಆಫರ್‌ನಲ್ಲಿ ಲಭ್ಯ!
Realme GT 7 ಫೋನ್ ಬೆಲೆಯಲ್ಲಿ ಇಳಿಕೆ
ರಿಯಲ್‌ಮಿ GT 7 ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB + 256GB ವೇರಿಯಂಟ್ ಬೆಲೆ 39,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 29,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ ಬ್ಲೂ, ಬ್ಲಾಕ್ ಮತ್ತು ರೇಸಿಂಗ್ ಯೆಲ್ಲೋ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.

ರಿಯಲ್‌ಮಿ GT 7 ಮೊಬೈಲ್‌ನ ಫೀಚರ್ಸ್ ಮಾಹಿತಿ
ರಿಯಲ್‌ಮಿ GT 7 ಮೊಬೈಲ್ ಡಿಸ್‌ಪ್ಲೇಯು 6.8 ಇಂಚಿನ FHD+ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1600 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Mediatek Dimensity 8400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್ 12GB RAM + 256GB, 8GB RAM + 256GB ಹಾಗೂ 12GB RAM + 512GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ ರಿಯಲ್‌ಮಿ GT 7 ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 7,000 mAh ಬ್ಯಾಟರಿ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile