12GB RAM ಇರುವ Realme GT 7 ಬೆಲೆಯಲ್ಲಿ ಭರ್ಜರಿ ಇಳಿಕೆ! ಆಫರ್‌ ಬೆಲೆ ಹಾಗೂ ಫೀಚರ್ಸ್‌ ನೋಡಿ

HIGHLIGHTS

ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್‌ನಲ್ಲಿ Realme GT 7 ಫೋನ್‌ಗೆ ಸಖತ್ ರಿಯಾಯಿತಿ

ರಿಯಲ್‌ಮಿಯ ಈ ಮೊಬೈಲ್‌ Mediatek Dimensity 8400 ಪ್ರೊಸೆಸರ್‌ ಬಲ ಪಡೆದಿದೆ

Realme GT 7 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಹೊಂದಿದೆ

12GB RAM ಇರುವ Realme GT 7 ಬೆಲೆಯಲ್ಲಿ ಭರ್ಜರಿ ಇಳಿಕೆ! ಆಫರ್‌ ಬೆಲೆ ಹಾಗೂ ಫೀಚರ್ಸ್‌ ನೋಡಿ

ರಿಯಲ್‌ಮಿ ಮೊಬೈಲ್‌ ಸಂಸ್ಥೆಯ Realme GT 7 ಸ್ಮಾರ್ಟ್‌ಫೋನ್‌ ಪ್ರಸ್ತುತ ಬೊಂಬಾಟ್‌ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಹೌದು, ಪ್ರಸ್ತುತ ಈ ಮೊಬೈಲ್‌ Flipkart ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ರಿಯಲ್‌ಮಿ ಕಂಪನಿಯ ಈ ಮೊಬೈಲ್‌ Mediatek Dimensity 8400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು ಇದರ ಜೊತೆಗೆ 7,000 mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ ಮೂರು ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್‌ ತಾಣದಲ್ಲಿ Realme GT 7 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಬಂದೇ ಬಿಡ್ತು Vivo V70 ಮೊಬೈಲ್‌! 50MP ZEISS ಕ್ಯಾಮೆರಾ ಇರುವ ಈ ಫೋನ್‌ ಬೆಲೆ ಎಷ್ಟು ನೋಡಿ

Realme GT 7 ಮೊಬೈಲ್‌ಗೆ ಸಖತ್ ಡಿಸ್ಕೌಂಟ್‌

ರಿಯಲ್‌ಮಿ ಕಂಪನಿಯ Realme GT 7 ಫೋನ್‌ ಪ್ರಸ್ತುತ Flipkart ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ಡಿಸ್ಕೌಂಟ್‌ ಪಡೆದಿದೆ. ಈ ಮೊಬೈಲ್‌ 12GB RAM + 256GB ವೇರಿಯಂಟ್‌ ಬೆಲೆ 42,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್‌ 37,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು Flipkart Axis ಹಾಗೂ SBI ಕ್ರೆಡಿಟ್‌ ಕಾರ್ಡ್‌ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 5,700 ರೂಗಳ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್‌ ಬ್ಲೂ, ಬ್ಲಾಕ್ ಮತ್ತು ರೇಸಿಂಗ್ ಯೆಲ್ಲೋ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Realme GT 7

Realme GT 7 ಮೊಬೈಲ್‌ನ ಪ್ರಮುಖ ಫೀಚರ್ಸ್‌ ಮಾಹಿತಿ

Realme GT 7 ಮೊಬೈಲ್‌ ಡಿಸ್‌ಪ್ಲೇಯು 6.8 ಇಂಚಿನ FHD+ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್‌ ರೇಟ್‌ ಹೊಂದಿದ್ದು ಜೊತೆಗೆ 1600 nits ಬ್ರೈಟ್ನೆಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಮೊಬೈಲ್‌ Mediatek Dimensity 8400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್‌ 12GB RAM + 256GB, 8GB RAM + 256GB ಹಾಗೂ 12GB RAM + 512GB ವೇರಿಯಂಟ್‌ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.

ಹಾಗೆಯೇ Realme GT 7 ಮೊಬೈಲ್‌ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್‌ 32MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 7,000 mAh  ಬ್ಯಾಟರಿ ಜೊತೆಗೆ 120W  ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo