ರಿಯಲ್‌ಮಿ ಮೊಬೈಲ್ ಸಂಸ್ಥೆಯ Realme GT 7 ಸ್ಮಾರ್ಟ್‌ಫೋನ್ ಪ್ರಸ್ತುತ ಬೊಂಬಾಟ್ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದೆ. ಹೌದು, ಪ್ರಸ್ತುತ ಈ ಮೊಬೈಲ್ Flipkart ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಲು ಅವಕಾಶ ಇದೆ. ರಿಯಲ್‌ಮಿ ಕಂಪನಿಯ ಈ ಮೊಬೈಲ್ Mediatek Dimensity 8400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದ್ದು ಇದರ ಜೊತೆಗೆ 7,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಮೂರು ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹಾಗಾದರೆ Flipkart ಇ ಕಾಮರ್ಸ್ ತಾಣದಲ್ಲಿ Realme GT 7 ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ಬಂದೇ ಬಿಡ್ತು Vivo V70 ಮೊಬೈಲ್! 50MP ZEISS ಕ್ಯಾಮೆರಾ ಇರುವ ಈ ಫೋನ್ ಬೆಲೆ ಎಷ್ಟು ನೋಡಿ
ರಿಯಲ್‌ಮಿ ಕಂಪನಿಯ Realme GT 7 ಫೋನ್ ಪ್ರಸ್ತುತ Flipkart ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 12GB RAM + 256GB ವೇರಿಯಂಟ್ ಬೆಲೆ 42,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಫೋನ್ 37,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಗ್ರಾಹಕರು Flipkart Axis ಹಾಗೂ SBI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿಯಾಗಿ 5,700 ರೂಗಳ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಬ್ಲೂ, ಬ್ಲಾಕ್ ಮತ್ತು ರೇಸಿಂಗ್ ಯೆಲ್ಲೋ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
Realme GT 7 ಮೊಬೈಲ್ ಡಿಸ್‌ಪ್ಲೇಯು 6.8 ಇಂಚಿನ FHD+ AMOLED ಮಾದರಿ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಹೊಂದಿದ್ದು ಜೊತೆಗೆ 1600 nits ಬ್ರೈಟ್ನೆಸ್ ಸಪೋರ್ಟ್ ಪಡೆದಿದೆ. ಇನ್ನು ಈ ಮೊಬೈಲ್ Mediatek Dimensity 8400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಪೊಕೊದ ಈ ಮೊಬೈಲ್ 12GB RAM + 256GB, 8GB RAM + 256GB ಹಾಗೂ 12GB RAM + 512GB ವೇರಿಯಂಟ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ನೀಡಲಾಗಿದೆ.
ಹಾಗೆಯೇ Realme GT 7 ಮೊಬೈಲ್ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಅನ್ನು ಒಳಗೊಂಡಿದ್ದು ಸೆಕೆಂಡರಿ ಕ್ಯಾಮೆರಾವು 8MP ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನು ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಮೊಬೈಲ್ 32MP ಸೆನ್ಸಾರ್ ಕ್ಯಾಮೆರಾ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 7,000 mAh ಬ್ಯಾಟರಿ ಜೊತೆಗೆ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.