ಜನಪ್ರಿಯ ಇ ಕಾಮರ್ಸ್ ವೆಬ್‌ಸೈಟ್‌ಗಳ ಪೈಕಿ ಒಂದಾಗಿರುವ ಫ್ಲಿಪ್‌ಕಾರ್ಟ್ ತಾಣದಲ್ಲಿ ಇದೀಗ ಆಯ್ದ ಮೊಬೈಲ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯ ಇದೆ. ಹೌದು, ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ಸಂಸ್ಥೆಯ Realme GT 7T ಮೊಬೈಲ್ ಸಖತ್ ಬೆಲೆ ಇಳಿಕೆ ದರದಲ್ಲಿ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8400 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ GT 7T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : 5,000mAh ಬ್ಯಾಟರಿ ಇರುವ Samsung ಕಂಪನಿಯ ಈ ಮೊಬೈಲ್ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್!
ರಿಯಲ್‌ಮಿ GT 7T ಮೊಬೈಲ್ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್ ರಿಯಾಯಿತಿ ಪಡೆದಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 27,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಐಸ್‌ಸೆನ್ಸ್ ಬ್ಲ್ಯಾಕ್, ಐಸ್‌ಸೆನ್ಸ್ ಬ್ಲೂ ಮತ್ತು ರೇಸಿಂಗ್ ಯೆಲ್ಲೋ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದ ಮೂಲಕ ಖರೀದಿಸಬಹುದಾಗಿದೆ.
ರಿಯಲ್‌ಮಿ GT 7T ಸ್ಮಾರ್ಟ್‌ಫೋನ್ 6.78 ಇಂಚಿನ ವಿಶಾಲ AMOLED ಡಿಸ್‌ಪ್ಲೇ ಹೊಂದಿದ್ದು ಇದು 2780×1264 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಜೊತೆಗೆ 6000 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಸಪೋರ್ಟ್ ಹೊಂದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8400 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. 8GB + 256GB, 12GB + 256GB ಹಾಗೂ 12GB + 512GB ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಇದು IP69 ರೇಟಿಂಗ್ ಸೌಲಭ್ಯ ಹೊಂದಿದ್ದು ಧೂಳು ಮತ್ತು ನೀರಿನ ಪ್ರತಿರೋಧ ಒದಗಿಸಲಿದೆ.
ರಿಯಲ್‌ಮಿ GT 7T ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಅವುಗಳು ಕ್ರಮವಾಗಿ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಹಾಗೂ 8MP ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೆನ್ಸಾರ್ ಆಗಿವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 32 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ. ಎರಡೂ ಕ್ಯಾಮೆರಾಗಳು 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಪೋರ್ಟ್ ಇದೆ. ರಿಯಲ್‌ಮಿ GT 7T ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು ಅದು 120W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.