256GB ಸ್ಟೋರೇಜ್‌ ಇರುವ realme GT 7T ಮೊಬೈಲ್‌ ಬೆಲೆಯಲ್ಲಿ ಸಖತ್‌ ಇಳಿಕೆ!

HIGHLIGHTS

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ಮಿ GT 7T ಫೋನ್‌ ಬೆಲೆ ಇಳಿಕೆ

ರಿಯಲ್‌ಮಿ GT 7T ಫೋನ್‌ 50MP ಸೆನ್ಸಾರ್‌ ಕ್ಯಾಮೆರಾ ರಚನೆ ಪಡೆದಿದೆ

ರಿಯಲ್‌ಮಿಯ ಈ ಮೊಬೈಲ್ 120W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ

256GB ಸ್ಟೋರೇಜ್‌ ಇರುವ realme GT 7T ಮೊಬೈಲ್‌ ಬೆಲೆಯಲ್ಲಿ ಸಖತ್‌ ಇಳಿಕೆ!

ರಿಯಲ್‌ಮಿ ಮೊಬೈಲ್‌ ಕಂಪನಿಯ realme GT 7T ಮೊಬೈಲ್ ಆಕರ್ಷಕ ಫೀಚರ್ಸ್‌ಗಳ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ಆಫರ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಸಂಸ್ಥೆಯ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8400 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಸಹ ಪಡೆದಿದೆ. ಅಲ್ಲದೇ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ರಿಯಲ್‌ಮಿ GT 7T ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Samsung Galaxy S26 Plus ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ! ಇದು ಸೀಮಿತ ಅವಧಿಯ ಆಫರ್‌

realme GT 7T ಬೆಲೆಯಲ್ಲಿ ಬಿಗ್‌ ಡಿಸ್ಕೌಂಟ್‌

ಆಕರ್ಷಕ ಫೀಚರ್ಸ್‌ಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರಿಯಲ್‌ಮಿ ಮೊಬೈಲ್‌ ಕಂಪನಿಯ ರಿಯಲ್‌ಮಿ GT 7T ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಭಾರೀ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 42,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 27,749 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದರ ಜೊತೆಗೆ ಗ್ರಾಹಕರಿಗೆ ಆಕರ್ಷಕ EMI ಆಯ್ಕೆಗಳು ಸಹ ಸಿಗುತ್ತವೆ. ಇನ್ನು ಈ ಮೊಬೈಲ್‌ ಆಕರ್ಷಕ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Realme GT 7

ರಿಯಲ್‌ಮಿ GT 7T ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ GT 7T ಮೊಬೈಲ್‌ 6.78 ಇಂಚಿನ ವಿಶಾಲ AMOLED ಡಿಸ್‌ಪ್ಲೇ ಹೊಂದಿದ್ದು ಇದು 2780×1264 ಪಿಕ್ಸೆಲ್‌ ರೆಸಲ್ಯೂಶನ್ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್‌ ಜೊತೆಗೆ 6000 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿದೆ. ಅಲ್ಲದೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8400 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯನಿರ್ವಹಿಸಲಿದೆ. 8GB + 256GB, 12GB + 256GB ಹಾಗೂ 12GB + 512GB ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಇದು IP69 ರೇಟಿಂಗ್ ಸೌಲಭ್ಯ ಹೊಂದಿದ್ದು ಧೂಳು ಮತ್ತು ನೀರಿನ ಪ್ರತಿರೋಧ ಒದಗಿಸಲಿದೆ.

ರಿಯಲ್‌ಮಿ GT 7T ಸ್ಮಾರ್ಟ್‌ಫೋನ್‌ ​​ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಅವುಗಳು ಕ್ರಮವಾಗಿ 50MP ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಹಾಗೂ 8MP ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಸೆನ್ಸಾರ್ ಆಗಿವೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ 32 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ನೀಡಲಾಗಿದೆ. ಎರಡೂ ಕ್ಯಾಮೆರಾಗಳು 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಪೋರ್ಟ್‌ ಇದೆ. ರಿಯಲ್‌ಮಿ GT 7T ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು ಅದು 120W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile