ಅಮೆಜಾನ್ ಆಯೋಜಿಸಿರುವ Amazon Great Summer Sale ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ಆಫರ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರಿಯಲ್‌ಮಿ ಸಂಸ್ಥೆಯ ಇತ್ತೀಚಿನ Realme Narzo 100 Lite 5G ಮೊಬೈಲ್ ಸಹ ಭರ್ಜರಿ ಬೆಲೆ ಇಳಿಕೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಎರಡು ಕಲರ್ ಆಯ್ಕೆಯಲ್ಲಿ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 100 ಲೈಟ್ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : ರಾಷ್ಟ್ರೀಯ ತಂತ್ರಜ್ಞಾನ ದಿನ 2026: Pokhran ಪರಮಾಣು ಪರೀಕ್ಷೆ ನೆನಪಿಸಿಕೊಂಡ ಪ್ರಧಾನಿ ಮೋದಿ
ರಿಯಲ್‌ಮಿ ನಾರ್ಜೋ 100 ಲೈಟ್ 5G ಫೋನ್ ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ವಾವ್ ಎನಿಸಿರುವ ರಿಯಾಯಿತಿ ಪಡೆದಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 13,498 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಮೊಬೈಲ್ ಫ್ರಾಸ್ಟ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಫೋನ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.
ರಿಯಲ್‌ಮಿ ನಾರ್ಜೋ 100 ಲೈಟ್ 5G ಮೊಬೈಲ್ 6.8 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 900 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 100 ಲೈಟ್ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Disclosure: This Article Contains Affiliate Links