ನಾಳೆ Realme Narzo 100 Lite 5G ಮಾರಾಟ ಪ್ರಾರಂಭ! ಅಗ್ಗದ ಬೆಲೆಯಲ್ಲಿ ಲಭ್ಯ

HIGHLIGHTS

ನಾಳೆ (ಏಪ್ರಿಲ್‌ 21 ರಿಂದ) ರಿಯಲ್‌ಮಿ ನಾರ್ಜೋ 100 ಲೈಟ್‌ ಸೇಲ್‌

ಈ ನೂತನ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

ಈ ಹೊಸ ಮೊಬೈಲ್‌ ಫ್ರಾಸ್ಟ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಕಲರ್ ಆಯ್ಕೆ ಪಡೆದಿದೆ

ನಾಳೆ Realme Narzo 100 Lite 5G ಮಾರಾಟ ಪ್ರಾರಂಭ! ಅಗ್ಗದ ಬೆಲೆಯಲ್ಲಿ ಲಭ್ಯ

ರಿಯಲ್‌ಮಿ ಕಂಪನಿಯ Realme Narzo 100 Lite 5G ಸ್ಮಾರ್ಟ್‌ಫೋನ್ ಅಗ್ಗದ ಬೆಲೆಯ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಏಪ್ರಿಲ್‌ 21 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ನೂತನ ಮೊಬೈಲ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 7,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 144Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಅಲ್ಲದೇ ಈ ಫೋನ್‌ ಫ್ರಾಸ್ಟ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ರಿಯಲ್‌ಮಿ ನಾರ್ಜೋ 100 ಲೈಟ್‌ 5G ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : 9,020mAh ಬ್ಯಾಟರಿ ಇರುವ Vivo T5 Pro 5G ಮೊಬೈಲ್‌ ನಾಳೆ ಖರೀದಿಗೆ ಲಭ್ಯ! ಬೆಲೆ ನೋಡಿ

Realme Narzo 100 Lite 5G ಸೇಲ್ ಮಾಹಿತಿ

ರಿಯಲ್‌ಮಿ ನಾರ್ಜೋ 100 ಲೈಟ್‌ 5G ಸ್ಮಾರ್ಟ್‌ಫೋನ್‌ ನಾಳೆ (ಏಪ್ರಿಲ್‌ 21 ರಂದು) ಮಧ್ಯಾಹ್ನ 12 ರಂದು ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 13,499 ರೂ.ಗಳು ಆಗಿದೆ. ಹಾಗೆಯೇ 4GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 14,499 ರೂ.ಗಳು ಆಗಿದೆ. ಅದೇ ರೀತಿ 6GB + 128GB ವೇರಿಯಂಟ್‌ ಬೆಲೆ 16,499 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಫ್ರಾಸ್ಟ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇದು ಅಮೆಜಾನ್ ಮತ್ತು ರಿಯಲ್‌ಮಿ ವೆಬ್‌ಸೈಟ್‌ ಮೂಲಕ ಮಾರಾಟಕ್ಕೆ ಬರಲಿದೆ.

Realme Narzo 100 Lite 5G

ರಿಯಲ್‌ಮಿ ನಾರ್ಜೋ 100 ಲೈಟ್‌ 5G ಫೀಚರ್ಸ್‌

ಹೊಸ ರಿಯಲ್‌ಮಿ ನಾರ್ಜೋ 100 ಲೈಟ್‌ 5G ಮೊಬೈಲ್‌ 6.8 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 900 nits ಪೀಕ್‌ ಬ್ರೈಟ್ನೆಸ್‌ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 100 ಲೈಟ್‌ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo