ಏಪ್ರಿಲ್‌ 14 ರಂದು Realme Narzo 100 Lite 5G ಲಾಂಚ್‌! 7,000mAh ಬ್ಯಾಟರಿ ಸಪೋರ್ಟ್‌

HIGHLIGHTS

ಶೀಘ್ರದಲ್ಲೇ ರಿಯಲ್‌ಮಿ ನಾರ್ಜೊ 100 ಲೈಟ್ ಮೊಬೈಲ್‌ ಮಾರುಕಟ್ಟೆಗೆ ಬರಲಿದೆ

ರಿಯಲ್‌ಮಿ ನಾರ್ಜೊ 100 ಲೈಟ್ ಫೋನ್‌ 7,000mAh ಬ್ಯಾಟರಿ ಸಪೋರ್ಟ್‌ ಪಡೆದಿರಲಿದೆ

ರಿಯಲ್‌ಮಿಯ ಈ ಮೊಬೈಲ್‌ ಥಂಡರ್ ಬ್ಲಾಕ್ ಮತ್ತು ಫ್ರಾಸ್ಟ್ ಸಿಲ್ವರ್ ಕಲರ್‌ ಆಯ್ಕೆ ಸಾಧ್ಯತೆ

Realme ಕಂಪನಿಯು ಹೊಸದಾಗಿ Realme Narzo 100 Lite 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಮೊಬೈಲ್‌ ಮುಂದಿನ ವಾರದಲ್ಲಿ ಅಧಿಕೃತವಾಗಿ ಲಾಂಚ್ ಆಗಲಿದೆ. ಇನ್ನು ಇದು ನಾರ್ಜೊ 100 ಸರಣಿಯ ಮೊದಲ ಮೊಬೈಲ್‌ ಆಗಿರಲಿದೆ. ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರುವುದು ಬಹುತೇಕ ಖಚಿತವಾಗಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಜೊತೆಗೆ 144Hz ರಿಫ್ರೆಶ್ ರೇಟ್‌ ಸೌಲಭ್ಯ ಒಳಗೊಂಡಿರುವುದು ಪಕ್ಕಾ ಎನ್ನಲಾಗಿದೆ. ಹಾಗಾದರೆ ಮುಂಬರುವ ರಿಯಲ್‌ಮಿ ನಾರ್ಜೊ 100 ಲೈಟ್ 5G ಮೊಬೈಲ್‌ನ ಲಾಂಚ್‌ ದಿನಾಂಕ ಹಾಗೂ ನಿರೀಕ್ಷಿತ ಫೀಚರ್ಸ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 9,000mAh ಸಿಲಿಕಾನ್ ಬ್ಯಾಟರಿ ಇರುವ OnePlus Nord 6 ಮೊಬೈಲ್‌ ನಾಳೆ ಖರೀದಿಗೆ ಲಭ್ಯ!

Realme Narzo 100 Lite 5G ಮೊಬೈಲ್‌ನ ಲಾಂಚ್‌ ಮಾಹಿತಿ

ರಿಯಲ್‌ಮಿ ಕಂಪನಿಯು ಕಡಿಮೆ ಬೆಲೆಯಲ್ಲಿ ಹೊಸದಾಗಿ ರಿಯಲ್‌ಮಿ ನಾರ್ಜೊ 100 ಲೈಟ್ 5G ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಈ ನೂತನ ಸ್ಮಾರ್ಟ್‌ಫೋನ್‌ ಅನ್ನು ಇದೇ ಏಪ್ರಿಲ್‌ 14 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಈ ಫೋನಿನ ಕುರಿತ ಮೈಕ್ರೋಸೈಟ್ ತೆರೆಯಲಾಗಿದೆ. ಲಾಂಚ್ ಬಳಿಕ ಅಮೆಜಾನ್, ರಿಯಲ್‌ಮಿ ವೆಬ್‌ಸೈಟ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಮಾರಾಟ ಪ್ರಾರಂಭಿಸಲಿದೆ. ಇನ್ನು ಈ ಫೋನ್‌ ಬೆಲೆಯು 10,000 ರೂ.ಗಳಿಂದ 12,000 ರೂ.ಗಳ ಪ್ರೈಸ್‌ಟ್ಯಾಗ್‌ನೊಂದಿಗೆ ಲಗ್ಗೆ ಇಡಬಹುದು ಎಂದು ನಿರೀಕ್ಷಿಸಲಾಗಿದೆ. ಅಂದಹಾಗೆ ಈ ಫೋನ್‌ ಥಂಡರ್ ಬ್ಲಾಕ್ ಮತ್ತು ಫ್ರಾಸ್ಟ್ ಸಿಲ್ವರ್ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿರಲಿದೆ.

ರಿಯಲ್‌ಮಿ ನಾರ್ಜೊ 100 ಲೈಟ್ 5G ನಿರೀಕ್ಷಿತ ಫೀಚರ್ಸ್‌

ಹೊಸ ರಿಯಲ್‌ಮಿ ನಾರ್ಜೊ 100 ಲೈಟ್ 5G ಮೊಬೈಲ್‌ 6.8 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿರುವ ಸಾಧ್ಯತೆಗಳು ಇವೆ. ಹಾಗೆಯೇ ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಸಪೋರ್ಟ್‌ ಜೊತೆಗೆ 900 nits ಬ್ರೈಟ್ನೆಸ್‌ ಬೆಂಬಲ ಹೊಂದಿರಲಿದೆ. ಅಲ್ಲದೇ ಇದು MediaTek Dimensity 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್‌ ಬೆಂಬಲ ಸಹ ಒಳಗೊಂಡಿರುವ ಸಾಧ್ಯತೆಗಳು ಇವೆ.

ಇನ್ನು ರಿಯಲ್‌ಮಿ ನಾರ್ಜೊ 100 ಲೈಟ್ 5G ಫೋನ್‌ ಹಿಂಭಾಗದಲ್ಲಿ 13MP ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಇನ್ನು ಈ ಮೊಬೈಲ್‌ ಆಂಡ್ರಾಯ್ಡ್ 16 ಆಧಾರಿತ ರಿಯಲ್‌ಮಿ UI 7.0 ಸಪೋರ್ಟ್‌ ಪಡೆದುಕೊಂಡಿರಲಿದೆ. ಇದರೊಂದಿಗೆ AI ಎರೇಸರ್ 2.0 ಮತ್ತು AI ಕ್ಲಿಯರ್ ಫೇಸ್‌ನಂತಹ AI ಫೀಚರ್ಸ್‌ಗಳನ್ನು ಕೂಡಾ ಇದು ಪಡೆದುಕೊಂಡಿರಲಿದೆ. ಇದು ಮಾರುಕಟ್ಟೆಯಲ್ಲಿ ರೆಡ್ಮಿ 15C 5G, ಸ್ಯಾಮ್‌ಸಂಗ್ ಗ್ಯಾಲಕ್ಸಿ F70e ನಂತಹ ಫೋನ್‌ಗಳಿಗೆ ಪೈಪೋಟಿ ನೀಡಲಿದೆ.

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :