ಅಗ್ಗದ ದರದ Realme Narzo 100 Lite 5G ಮೊಬೈಲ್ ಖರೀದಿಗೆ ಇದಕ್ಕಿಂತ ಬೆಸ್ಟ್ ಆಫರ್ ಬೇಕೆ?
ಅಮೆಜಾನ್‌ನಲ್ಲಿ ರಿಯಲ್‌ಮಿ ನಾರ್ಜೋ 100 ಲೈಟ್ ಫೋನಿಗೆ ಬಿಗ್ ಡಿಸ್ಕೌಂಟ್
ರಿಯಲ್‌ಮಿ ನಾರ್ಜೋ 100 ಲೈಟ್ ಮೊಬೈಲ್ 7,000mAh ಬ್ಯಾಟರಿ ಪಡೆದಿದೆ
ರಿಯಲ್‌ಮಿ ನಾರ್ಜೋ 100 ಲೈಟ್ ಮೊಬೈಲ್ ಆಕರ್ಷಕ ಕಲರ್‌ಗಳಲ್ಲಿ ಲಭ್ಯ

ಇ ಕಾಮರ್ಸ್ ತಾಣ ಅಮೆಜಾನ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಿದೆ. ಆ ಪೈಕಿ Realme Narzo 100 Lite 5G ಸ್ಮಾರ್ಟ್‌ಫೋನ್ ಸಹ ಸ್ಪೆಷಲ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 13MP ಮುಖ್ಯ ಕ್ಯಾಮೆರಾ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ನಲ್ಲಿ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 100 ಲೈಟ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Realme Narzo 100 Lite 5G ಈಗ ಡಿಸ್ಕೌಂಟ್‌ನಲ್ಲಿ ಲಭ್ಯ
ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ ನಾರ್ಜೋ 100 ಲೈಟ್ ಮೊಬೈಲ್ ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೊಬೈಲ್ 4GB + 64GB ಸ್ಟೋರೇಜ್ ವೇರಿಯಂಟ್ ಬೆಲೆ 24,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್ ಬ್ಯಾಂಕ್ ಆಫರ್‌ಗಳ ಮೂಲಕ 16,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಅನ್ನು ಗ್ರಾಹಕರು ಫ್ರಾಸ್ಟ್ ಸಿಲ್ವರ್ ಮತ್ತು ಥಂಡರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದು.
ರಿಯಲ್‌ಮಿ ನಾರ್ಜೋ 100 ಲೈಟ್ 5G ಮೊಬೈಲ್ ಫೀಚರ್ಸ್
ರಿಯಲ್‌ಮಿ ನಾರ್ಜೋ 100 ಲೈಟ್ 5G ಮೊಬೈಲ್ 6.8 ಇಂಚಿನ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 900 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 100 ಲೈಟ್ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 5 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 15W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
Manthesh B
Manthesh B ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
View full profile
