Realme Narzo 100x 5G ಮೊಬೈಲ್‌ ಸೇಲ್‌ ನಾಳೆಯಿಂದ ಶುರು! ಬೆಲೆ ಹಾಗೂ ಫೀಚರ್ಸ್‌

HIGHLIGHTS

ನಾಳೆಯಿಂದ ರಿಯಲ್‌ಮಿ ನಾರ್ಜೋ 100x 5G ಫೋನ್‌ ಸೇಲ್‌ ಶುರು

ರಿಯಲ್‌ಮಿಯ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ ಹೊಂದಿದೆ

ಈ ಹೊಸ ಫೋನ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಆರೆಂಜ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ

Realme Narzo 100x 5G ಮೊಬೈಲ್‌ ಸೇಲ್‌ ನಾಳೆಯಿಂದ ಶುರು! ಬೆಲೆ ಹಾಗೂ ಫೀಚರ್ಸ್‌

ರಿಯಲ್‌ಮಿ ಕಂಪನಿಯ ಹೊಸ Realme Narzo 100x 5G ಮೊಬೈಲ್ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ನಾಳೆ (ಜುಲೈ 22 ರಿಂದ) ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಶುರು ಮಾಡಲಿದೆ. ಈ ನೂತನ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 8,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಹಾಗೆಯೇ ಇದು ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಆರೆಂಜ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹಾಗಾದರೇ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಅತ್ಯುತ್ತಮ ಫೀಚರ್ಸ್‌ ಒಳಗೊಂಡ Motorola Signature ಮೊಬೈಲ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ನಾಳೆ Realme Narzo 100x 5G ಸೇಲ್‌ ಶುರು

ದೇಶೀಯ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪನಿಯ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ನಾಳೆ (ಜುಲೈ 22 ರಿಂದ) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಮೂಲಕ ಖರೀದಿಗೆ ಲಭ್ಯವಾಗಲಿದೆ. ಈ ಮೊಬೈಲ್‌ನ 4GB RAM + 64GB ಸ್ಟೋರೇಜ್‌ ವೇರಿಯಂಟ್‌ 20,999 ರೂ.ಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 6GB + 128GB ಸ್ಟೋರೇಜ್‌ ವೇರಿಯಂಟ್‌ 22,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು 6GB + 256GB ಸ್ಟೋರೇಜ್‌ ವೇರಿಯಂಟ್‌ 24,999 ರೂ.ಗಳ ಪ್ರೈಸ್‌ಟ್ಯಾಗ್‌ ಅನ್ನು ಪಡೆದುಕೊಂಡಿದೆ. ಈ ಫೋನ್‌ ಮಿಡ್‌ನೈಟ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇರಲಿದೆ.

Realme Narzo 100x 5G
Realme Narzo 100x 5G

ರಿಯಲ್‌ಮಿ ನಾರ್ಜೋ 100x 5G ಫೀಚರ್ಸ್‌ ಮಾಹಿತಿ

ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ 6.8 ಇಂಚಿನ HD+ LCD ಪ್ಯಾನೆಲ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB, 6GB + 256GB ಹಾಗೂ 6GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ Realme UI 7.0 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಎರಡನೇ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 45W SuperVOOC ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile