Realme Narzo 100x ಮೊಬೈಲ್‌ ಖರೀದಿಗೆ ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕೆ? 144Hz ರಿಫ್ರೆಶ್ ರೇಟ್‌ ಸೌಲಭ್ಯ

HIGHLIGHTS

ರಿಯಲ್‌ಮಿ ನಾರ್ಜೋ 100x ಫೋನಿಗೆ ಅಮೆಜಾನ್‌ನಲ್ಲಿ ಬಿಗ್‌ ಡಿಸ್ಕೌಂಟ್‌

ರಿಯಲ್‌ಮಿ ನಾರ್ಜೋ 100x ಮೊಬೈಲ್‌ 8,000mAh ಬ್ಯಾಟರಿ ಒಳಗೊಂಡಿದೆ

ರಿಯಲ್‌ಮಿ ನಾರ್ಜೋ 100x ಸ್ಮಾರ್ಟ್‌ಫೋನ್‌ ಎರಡು ಆಕರ್ಷಕ ಕಲರ್‌ನಲ್ಲಿ ಲಭ್ಯ

Realme Narzo 100x ಮೊಬೈಲ್‌ ಖರೀದಿಗೆ ಇದಕ್ಕಿಂತ ಬೆಸ್ಟ್‌ ಆಫರ್‌ ಬೇಕೆ? 144Hz ರಿಫ್ರೆಶ್ ರೇಟ್‌ ಸೌಲಭ್ಯ

ಅಮೆಜಾನ್‌ ತಾಣದಲ್ಲಿ ಚಾಲ್ತಿ ಇರುವ Amazon Great Indian Festival Sale 2026 ಸೇಲ್ ಆನ್‌ಲೈನ್‌ ಶಾಪಿಂಗ್ ಪ್ರಿಯರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದ್ದು, ಆ ಪೈಕಿ Realme Narzo 100x 5G ಮೊಬೈಲ್‌ ಗಮನಾರ್ಹ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 8,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : ಕಡಿಮೆ ದರದಲ್ಲಿ ಅಧಿಕ ವ್ಯಾಲಿಡಿಟಿ ಜೊತೆಗೆ ಪ್ರತಿದಿನ ಡೇಟಾ ಬೇಕಿದ್ರೆ, Jio ಸಂಸ್ಥೆಯ ಈ ಪ್ಲಾನ್‌ ಬೆಸ್ಟ್‌!

Realme Narzo 100x 5G ಫೋನಿಗೆ ಬೊಂಬಾಟ್‌ ಆಫರ್‌

ಅಗ್ಗದ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 35,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 24,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಮಿಡ್‌ನೈಟ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಆರೆಂಜ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರಿಯಲ್‌ಮಿ ನಾರ್ಜೋ 100x 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

8000mAh battery realme Narzo 100x 5G phone gets massive price discount on Flipkart deal
realme Narzo 100x 5G

ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ 6.8 ಇಂಚಿನ HD+ LCD ಪ್ಯಾನೆಲ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 144Hz ರಿಫ್ರೆಶ್ ರೇಟ್‌ ಜೊತೆಗೆ 1,200 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ 4GB RAM + 64GB, 6GB + 256GB ಹಾಗೂ 6GB + 128GB ವೇರಿಯಂಟ್‌ಗಳ ಆಯ್ಕೆ ಒಳಗೊಂಡಿದೆ. ಹಾಗೆಯೇ ಇದು ಇತ್ತೀಚಿನ ಆಂಡ್ರಾಯ್ಡ್‌ 16 ಆಧಾರಿತ Realme UI 7.0 ನೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 100x 5G ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾವು ಬೇಸಿಕ್‌ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಅಲ್ಲದೇ ಇದು 8,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಜೊತೆಗೆ 45W SuperVOOC ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ.

Disclosure: This Article Contains Affiliate Links

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile