ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಬಜೆಟ್ ಹಾಗೂ ಅಗ್ಗದ ದರದ ಸ್ಮಾರ್ಟ್‌ಫೊನ್‌ಗಳಿಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಹಲವು ಫೋನ್‌ಗಳು ಕೈಗೆಟುವ ಬೆಲೆಯ ವಿಭಾಗದಲ್ಲಿ ಎಂಟ್ರಿ ಕೊಡುತ್ತವೆ. ಅಂತಹ ಫೋನ್‌ಗಳ ಪೈಕಿ ರಿಯಲ್‌ಮಿ ಕಂಪನಿಯ Realme NARZO 80 Lite 5G ಮೊಬೈಲ್ ಸಹ ಒಂದಾಗಿದ್ದು ಸದ್ಯ ಅಮೆಜಾನ್‌ನಲ್ಲಿ ಈ ಮೊಬೈಲ್ ಭರ್ಜರಿ ಬೆಲೆ ಇಳಿಕೆ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ರಿಯಲ್‌ಮಿ ನಾರ್ಜೋ 80 ಲೈಟ್ 5G ಮೊಬೈಲ್ MediaTek Dimensity 6300 ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಕೆಲಸ ಮಾಡಲಿದೆ ಹಾಗೂ 6,000 mAh ಬ್ಯಾಟರಿ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ 32MP ಕ್ಯಾಮೆರಾ ಸಪೋರ್ಟ್ ಸಹ ಪಡೆದುಕೊಂಡಿದೆ. ಹಾಗಾದರೆ ಅಮೆಜಾನ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 80 ಲೈಟ್ 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : ಭಾರತದಲ್ಲಿ iPhone 17e ಮೊಬೈಲ್ ಬಿಡುಗಡೆ! 48MP ಕ್ಯಾಮೆರಾ, A19 ಚಿಪ್‌ಸೆಟ್ ಸೌಲಭ್ಯ
ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ ನಾರ್ಜೋ 80 ಲೈಟ್ 5G ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 4GB + 128GB ವೇರಿಯಂಟ್ ಬೆಲೆ 13,999 ರೂಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 11,999 ರೂಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಪಡೆಯಬಹುದಾಗಿದೆ. ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಅಂದಹಾಗೆ ಈ ಫೋನ್ ಬ್ಲ್ಯಾಕ್ ಹಾಗೂ ಕ್ರಿಸ್ಟಲ್ ಪರ್ಪಲ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.
ರಿಯಲ್‌ಮಿ ನಾರ್ಜೋ 80 ಲೈಟ್ 5G ಮೊಬೈಲ್ 6.72 ಇಂಚಿನ HD+ ಪ್ಯಾನೆಲ್ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಮೊಬೈಲ್ MediaTek Dimensity 6300 5G ಚಿಪ್‌ಸೆಟ್ ಪ್ರೊಸೆಸರ್ ಬೆಂಬಲದಲ್ಲಿ ಪಡೆದಿದೆ ಹಾಗೂ Android 15 ಆಧಾರಿತ Realme UI 6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಅನುಗುಣವಾಗಿ 4GB + 128GB ಹಾಗೂ 6GB RAM + 128GB ಸ್ಟೋರೇಜ್ ಆಯ್ಕೆಗಳನ್ನು ಹೊಂದಿದೆ. ಇನ್ನು ಈ ಮೊಬೈಲ್ 15W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 6,000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 80 ಲೈಟ್ 5G ಮೊಬೈಲ್ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದು ಮಾತ್ರೆ ಆಕಾರದ LED ಫ್ಲ್ಯಾಷ್ ಮತ್ತು AI ಕ್ಲಿಯರ್ ಫೇಸ್ ಬೆಂಬಲಿತ 32MP ಪ್ರಾಥಮಿಕ ಕ್ಯಾಮೆರಾ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ 8MP ಕ್ಯಾಮೆರಾ ಪಡೆದುಕೊಂಡಿದೆ. ನೀರು ಮತ್ತು ಧೂಳು ನಿರೋಧಕಕ್ಕಾಗಿ ಇದು IP64 ರೇಟಿಂಗ್ ಪಡೆದಿದೆ.