ಸ್ಟೈಲಿಶ್‌ ಲುಕ್ ಇರುವ Realme NARZO 80 Pro 5G ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ

HIGHLIGHTS

ಅಮೆಜಾನ್‌ನಲ್ಲಿ ರಿಯಲ್‌ಮಿ ನಾರ್ಜೋ 80 ಪ್ರೊ 5G ಫೋನ್ ಬೆಲೆ ಇಳಿಕೆ

ರಿಯಲ್‌ಮಿ ಕಂಪನಿಯ ಈ ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ಸೌಲಭ್ಯ ಪಡೆದುಕೊಂಡಿದೆ

ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನ್‌ 80W ಫಾಸ್ಟ್‌ ಚಾರ್ಜಿಂಗ್ ಒಳಗೊಂಡಿದೆ

ಸ್ಟೈಲಿಶ್‌ ಲುಕ್ ಇರುವ Realme NARZO 80 Pro 5G ಮೊಬೈಲ್‌ ಬೆಲೆಯಲ್ಲಿ ಸಖತ್ ಇಳಿಕೆ

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಅಮೆಜಾನ್‌ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ಆಫರ್‌ ನೀಡುತ್ತಾ ಗ್ರಾಹಕರ ಗಮನ ಸೆಳೆಯುತ್ತದೆ. ಅಮೆಜಾನ್‌ನಲ್ಲಿ ಇದೀಗ Realme NARZO 80 Pro 5G ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದಲ್ಲದೇ ಗ್ರಾಹಕರು ಬ್ಯಾಂಕ್‌ ಆಫರ್‌ ಪಡೆದುಕೊಂಡು ಖರೀದಿಸಿದರೆ ಮತ್ತಷ್ಟು ಹೆಚ್ಚುವರಿ ರಿಯಾಯಿತಿ ಪಡೆಯಬಹುದಾಗಿದೆ. ಅಂದಹಾಗೆ ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ ಹಾಗೂ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದುಕೊಂಡಿದೆ. ಇದರೊಂದಿಗೆ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗಾದರೆ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಬಗ್ಗೆ ಮುಂದೆ ತಿಳಿಯೋಣ.

Digit.in Survey
✅ Thank you for completing the survey!

Also Read : Airtel 3GB Data Plan: ಈ ಪ್ಲಾನಿನಲ್ಲಿ ಪ್ರತಿದಿನ 3GB ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಖಚಿತ

Realme NARZO 80 Pro 5G ಬೆಲೆಯಲ್ಲಿ ಭಾರೀ ಇಳಿಕೆ

ರಿಯಲ್‌ಮಿ ಕಂಪನಿಯ ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ನಲ್ಲಿ ಬೊಂಬಾಟ್‌ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ವೇರಿಯಂಟ್‌ ಬೆಲೆ 23,999 ರೂ.ಗಳು ಪ್ರೈಸ್‌ಟ್ಯಾಗ್‌ ಹೊಂದಿದೆ. ಆದರೆ ಪ್ರಸ್ತುತ ಈ ಮೊಬೈಲ್‌ ಅನ್ನು ಗ್ರಾಹಕರು 17,999 ರೂ.ಗಳ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಆಸಕ್ತ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ಗಳ ಕೊಡುಗೆ ಪಡೆದುಕೊಂಡರೆ ಮತ್ತಷ್ಟು ರಿಯಾಯಿತಿ ಪಡೆಯಬಹುದು. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಸಹ ಲಭ್ಯ ಇವೆ. ಅಂದಹಾಗೆ ಈ ಫೋನ್‌ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.

Realme NARZO 80 Pro 5G

ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್‌ ಫೀಚರ್ಸ್‌

ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನ್‌ 120Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ 4500 nits ಬ್ರೈಟ್ನೆಸ್‌ ಸೌಲಭ್ಯ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB + 128GB, 8GB + 256GB ಮತ್ತು 12GB + 512GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ Android 15 ಓಎಸ್‌ ಬೆಂಬಲ ಪಡೆದುಕೊಂಡಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ ಸಹ 2MP ಸೆನ್ಸಾರ್‌ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 16MP ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್‌ 6,000mAh ಬ್ಯಾಟರಿ ಜೊತೆಗೆ 80W ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ. ಇದರೊಂದಿಗೆ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

Manthesh B

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile

Digit.in
Logo
Digit.in
Logo