Realme NARZO 80 Pro 5G ಫೋನ್‌ಗೆ ಭಾರೀ ಡಿಸ್ಕೌಂಟ್! ಈಗ ಕಡಿಮೆ ಬೆಲೆಯಲ್ಲಿ ಲಭ್ಯ
ರಿಯಲ್‌ಮಿಯ ಈ ಮೊಬೈಲ್ ಬೆಲೆಯಲ್ಲಿ ಈಗ ಭಾರೀ ಕಡಿತ
ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಪೋರ್ಟ್ ಹೊಂದಿದೆ
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ
ರಿಯಲ್‌ಮಿ ಕಂಪನಿಯ Realme NARZO 80 Pro 5G ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : Vivo X200T ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ! ಈ ಚಾನ್ಸ್ ಕಳ್ಕೋಬೇಡಿ
Realme NARZO 80 Pro 5G ಬೆಲೆಯಲ್ಲಿ ಗಮನಾರ್ಹ ಇಳಿಕೆ
ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್ ಬಜೆಟ್ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 25,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 20,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ. ಈ ಮೊಬೈಲ್ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿರಿ.

ರಿಯಲ್‌ಮಿ ನಾರ್ಜೋ 80 ಪ್ರೊ 5G ಫೋನ್ ಫೀಚರ್ಸ್
ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ 4500 nits ಬ್ರೈಟ್ನೆಸ್ ಸೌಲಭ್ಯ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB + 128GB, 8GB + 256GB ಮತ್ತು 12GB + 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ Android 15 ಓಎಸ್ ಬೆಂಬಲ ಪಡೆದುಕೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ ಸಹ 2MP ಸೆನ್ಸಾರ್ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 16MP ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile