ರಿಯಲ್‌ಮಿ ಕಂಪನಿಯ Realme NARZO 80 Pro 5G ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. ಇನ್ನು ಆಸಕ್ತ ಗ್ರಾಹಕರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳ ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಖರೀದಿಸಿದರೆ ಹೆಚ್ಚುವರಿ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿರುವ ಜೊತೆಗೆ ಈ ಸ್ಮಾರ್ಟ್‌ಫೋನ್ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vivo X200T ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಸಖತ್ ಇಳಿಕೆ! ಈ ಚಾನ್ಸ್ ಕಳ್ಕೋಬೇಡಿ
ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್ ಬಜೆಟ್ ಬೆಲೆಯಲ್ಲಿ ಹಾಗೂ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನ ಗ್ರೇಟ್ ಸಮ್ಮರ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದಿದೆ. ಈ ಮೊಬೈಲ್ 8GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 25,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 20,999 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಸ್ಪೀಡ್ ಸ್ಲಿವರ್, ರೇಸಿಂಗ್ ಗ್ರೀನ್ ಮತ್ತು ನೈಟ್ರೋ ಆರೆಂಜ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಬಹುದಾಗಿದೆ.
ರಿಯಲ್‌ಮಿ ನಾರ್ಜೋ 80 ಪ್ರೊ 5G ಸ್ಮಾರ್ಟ್‌ಫೋನ್ 120Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರೊಂದಿಗೆ 4500 nits ಬ್ರೈಟ್ನೆಸ್ ಸೌಲಭ್ಯ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ 8GB + 128GB, 8GB + 256GB ಮತ್ತು 12GB + 512GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ Android 15 ಓಎಸ್ ಬೆಂಬಲ ಪಡೆದುಕೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 80 ಪ್ರೊ 5G ಮೊಬೈಲ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ 50MP ಪ್ರಾಥಮಿಕ ಕ್ಯಾಮೆರಾ ಹೊಂದಿದ್ದು ಹಾಗೆಯೇ ಇದರ ಸೆಕೆಂಡರಿ ಕ್ಯಾಮೆರಾ ಸಹ 2MP ಸೆನ್ಸಾರ್ ಪಡೆದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 16MP ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್ 6,000mAh ಬ್ಯಾಟರಿ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP69 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.