Realme Narzo 80 Pro 5G Price in India
Realme Narzo 80 Pro Price in India: ಭಾರತದಲ್ಲಿ ರಿಯಲ್‌ಮಿ ಕಂಪನಿ ಇಂದು ತನ್ನ ಲೇಟೆಸ್ಟ್ Realme Narzo 80 Pro ಸ್ಮಾರ್ಟ್ಫೋನ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್ಫೋನ್ ವಿಶೇಷತೆಗಳನ್ನು ನೋಡುವುದಾದ್ರೆ 50MP Sony IMX882 ಕ್ಯಾಮೆರಾದೊಂದಿಗೆ 6000mAh ಬ್ಯಾಟರಿ ಮತ್ತು 80W ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದೆ. ಈ ಸ್ಮಾರ್ಟ್ಫೋನ್ 19,999 ರೂಗಳ ಪರಿಚಯಾತ್ಮಕ ಬೆಲೆಯೊಂದಿಗೆ ಬಿಡುಗಡೆಯಾಗಿದೆ. ಹಾಗಾದ್ರೆ ಈ Realme Narzo 80x 5G ಸ್ಮಾರ್ಟ್ಫೋನ್ ಆಫರ್ ಬೆಲೆ ಎಷ್ಟು ಮತ್ತು ಇದರ ಫೀಚರ್ಗಳೇನು ಎಲ್ಲವನ್ನು ತಿಳಿಯೋಣ.
Realme Narzo 80 Pro 5G ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹19,999 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹21,499 ರೂಗಳಿಗೆ ಮತ್ತು ಕೊನೆಯದಾಗಿ ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರವನ್ನು ₹23,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು 1500 ರೂಗಳ ಉಚಿತ ಕೂಪನ್ ಮತ್ತು 500 ರೂಗಳ ಬ್ಯಾಂಕ್ ಡಿಸ್ಕೌಂಟ್ಗಳೊಂದಿಗೆ ಆರಂಭಿಕ ಮಾದರಿಯನ್ನು ಕೇವಲ ₹17,999 ರೂಗಳಿಗೆ ಖರೀದಿಸಬಹುದು.
Also Read: 32 ಇಂಚಿನ ಜಬರ್ದಸ್ತ್ QLED Smart TV ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ ₹7,999 ರೂಗಳಿಗೆ ಮಾರಾಟವಾಗುತ್ತಿದೆ!
Realme Narzo 80 Pro 5G ಸ್ಮಾರ್ಟ್ಫೋನ್ 120Hz ರಿಫ್ರೆಶ್ ರೇಟ್ನೊಂದಿಗೆ 6.83 FHD+ 3D Curved OLED ಹೊಂದಿದೆ. ಹೆಚ್ಚುವರಿಯಾಗಿ ಫೋಟೋಗಳು ಮತ್ತು ವೀಡಿಯೊಗಳಿಗಾಗಿ Realme Narzo 80 Pro ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು f/1.8 ಅಪಾರ್ಚರ್‌ನೊಂದಿಗೆ 50MP Sony IMX882 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು ಮತ್ತೊಂದು 2MP ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಇದರ ಕ್ರಮವಾಗಿ ಫೋನ್ ಮುಂಭಾಗದಲ್ಲಿ ಸೇಲ್ಫಿ ಮತ್ತು ವಿಡಿಯೋ ಕರೆಗಾಗಿ 16MP ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಸ್ಮಾರ್ಟ್ಫೋನ್ ವಾಟರ್ ಮತ್ತು ಡಸ್ಟ್ ಪ್ರೊಟೆಕ್ಷನ್‌ಗಾಗಿ IP69 ರೇಟಿಂಗ್ ಅನ್ನು ಸಹ ಈ ಫೋನ್ ಹೊಂದಿದೆ.
Realme Narzo 80 Pro ಸ್ಮಾರ್ಟ್ಫೋನ್ MediaTek Dimensity 6400 ಪ್ರೊಸೆಸರ್‌ನೊಂದಿಗೆ ಬರುತ್ತದೆ. Realme Narzo 80 Pro ಸ್ಮಾರ್ಟ್ಫೋನ್ ಇದರ 8GB RAM ಆನ್‌ಬೋರ್ಡ್ ಮೆಮೊರಿಯನ್ನುಹೊಂದಿದ್ದು ಹೆಚ್ಚುವರಿಯ ಸ್ಟೋರೇಜ್ ವಿಸ್ತರಿಸುವ ಆಯ್ಕೆಯನ್ನು ಹೊಂದಿದೆ. ಇದರ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C, Proximity Sensor, Environmental light sensor, Acceleration sensor, gyroscope, Under-screen optical fingerprint sensor, Front color sensor, Geomagnetic sensor ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ ಈ ಸ್ಮಾರ್ಟ್ಫೋನ್ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 80W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.