ಬಜೆಟ್ ದರದ Realme Narzo 90x 5G ಮೊಬೈಲ್ ಈಗ ಆಫರ್ ಬೆಲೆಯಲ್ಲಿ ಲಭ್ಯ!
ಅಮೆಜಾನ್‌ನಲ್ಲಿ ರಿಯಲ್‌ಮಿ ನಾರ್ಜೋ 90x ಫೋನ್‌ಗೆ ಭಾರೀ ಡಿಸ್ಕೌಂಟ್
ರಿಯಲ್‌ಮಿ ನಾರ್ಜೋ 90x ಮೊಬೈಲ್ 7,000mAh ಬ್ಯಾಟರಿ ಪವರ್ ಪಡೆದಿದೆ
ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಹೊಂದಿದೆ
ಲೀಡಿಂಗ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿರುವ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ನಥಿಂಗ್ ಕಂಪನಿಯ Realme Narzo 90x 5G ಸ್ಮಾರ್ಟ್‌ಫೋನ್ ಗಮನಾರ್ಹ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಮೊಬೈಲ್ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಫ್ಲ್ಯಾಶ್ ಬ್ಲೂ, ನಿಟ್ರೋ ಬ್ಲ್ಯೂ ಮತ್ತು ಮರೋನ್ ರೆಡ್ ಕಲರ್ ಆಯ್ಕೆಯಲ್ಲಿ ಸಿಗಲಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
SurveyAlso Read : ಸ್ಟೈಲಿಶ್ ಲುಕ್ ಹೊಂದಿರುವ Nothing Phone 4b ಮೊಬೈಲ್ ಸಖತ್ ಡಿಸ್ಕೌಂಟ್ ಬೆಲೆಗೆ ಲಭ್ಯ!
Realme Narzo 90x 5G ಬೆಲೆಯಲ್ಲಿ ಸಖತ್ ಇಳಿಕೆ
ಬಜೆಟ್ ದರದಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ ನಾರ್ಜೋ 90x 5G ಮೊಬೈಲ್ ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 33,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 21,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಈ ಫೋನ್ ಫ್ಲ್ಯಾಶ್ ಬ್ಲೂ, ನಿಟ್ರೋ ಬ್ಲ್ಯೂ ಮತ್ತು ಮರೋನ್ ರೆಡ್ ಕಲರ್ ಆಯ್ಕೆ ಹೊಂದಿದೆ.

ರಿಯಲ್‌ಮಿ ನಾರ್ಜೋ 90x 5G ಫೋನಿನ ಫೀಚರ್ಸ್
ರಿಯಲ್‌ಮಿ ನಾರ್ಜೋ 90x 5G ಮೊಬೈಲ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.80 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1,200 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 4GB + 128GB, 6GB + 128GB ಹಾಗೂ 8GB + 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 90x 5G ಮೊಬೈಲ್ ಹಿಂಭಾಗದಲ್ಲಿ 50MP ಸೋನಿ IMX852 ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 7,000 mAh ಸಾಮರ್ಥ್ಯದ ಬಿಗ್ ಬ್ಯಾಟರಿ ಜೊತೆಗೆ 60W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile
