7,000mAh ಬ್ಯಾಟರಿ ಇರುವ Realme Narzo 90x 5G ಮೊಬೈಲ್ ಖರೀದಿಗೆ ಇದೇ ಬೆಸ್ಟ್ ಟೈಮ್!
ಅಮೆಜಾನ್ ತಾಣದಲ್ಲಿ ರಿಯಲ್‌ಮಿ ನಾರ್ಜೋ 90x 5G ಬೆಲೆ ಇಳಿಕೆ
ರಿಯಲ್‌ಮಿಯ ಈ ಮೊಬೈಲ್ 8MP ಸೆಲ್ಫಿ ಕ್ಯಾಮೆರಾ ರಚನೆ ಅನ್ನು ಪಡೆದಿದೆ
ನಾರ್ಜೋ 90x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಪಡೆದುಕೊಂಡಿದೆ
ಇ ಕಾಮರ್ಸ್ ವೆಬ್‌ಸೈಟ್‌ಗಳು ಎಲ್ಲ ವಿಭಾಗದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸುತ್ತವೆ. ಹೀಗಾಗಿ ಅನೇಕರು ಗ್ರಾಹಕರು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳತ್ತ ಕಣ್ಣಾಡಿಸುತ್ತಾರೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ಸಂಸ್ಥೆಯ Realme Narzo 90x 5G ಸ್ಮಾರ್ಟ್‌ಫೋನ್ ಬೊಂಬಟ್ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ರಿಯಲ್‌ಮಿಯ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
SurveyAlso Read : Motorola G96 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ! ಈ ಚಾನ್ಸ್ ಕಳ್ಕೋಬೇಡಿ
Realme Narzo 90x 5G ಬೆಲೆಯಲ್ಲಿ ಭಾರೀ ಇಳಿಕೆ
ರಿಯಲ್‌ಮಿ ನಾರ್ಜೋ 90x 5G ಸ್ಮಾರ್ಟ್‌ಫೋನ್ ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ ಫ್ಲ್ಯಾಶ್ ಬ್ಲೂ, ನಿಟ್ರೋ ಬ್ಲ್ಯೂ ಮತ್ತು ಮರೋನ್ ರೆಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ರಿಯಲ್‌ಮಿ ನಾರ್ಜೋ 90x 5G ಫೋನಿನ ಫೀಚರ್ಸ್
ರಿಯಲ್‌ಮಿ ನಾರ್ಜೋ 90x 5G ಮೊಬೈಲ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.80 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1,200 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 4GB + 128GB, 6GB + 128GB ಹಾಗೂ 8GB + 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 90x 5G ಮೊಬೈಲ್ ಹಿಂಭಾಗದಲ್ಲಿ 50MP ಸೋನಿ IMX852 ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 7,000mAh ಬ್ಯಾಟರಿ ಜೊತೆಗೆ 60W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
Manthesh B
ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. View Full Profile