ಇ ಕಾಮರ್ಸ್ ವೆಬ್‌ಸೈಟ್‌ಗಳು ಎಲ್ಲ ವಿಭಾಗದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸುತ್ತವೆ. ಹೀಗಾಗಿ ಅನೇಕರು ಗ್ರಾಹಕರು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳತ್ತ ಕಣ್ಣಾಡಿಸುತ್ತಾರೆ. ಪ್ರಸ್ತುತ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ಸಂಸ್ಥೆಯ Realme Narzo 90x 5G ಸ್ಮಾರ್ಟ್‌ಫೋನ್ ಬೊಂಬಟ್ ರಿಯಾಯಿತಿ ಪಡೆದುಕೊಂಡಿದೆ. ಇದಲ್ಲದೇ ಬ್ಯಾಂಕ್ ಆಫರ್ ಪಡೆದುಕೊಂಡು ಖರೀದಿಸಿದರೆ ಇನ್ನಷ್ಟು ಹೆಚ್ಚುವರಿ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ ರಿಯಲ್‌ಮಿಯ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇನ್ನು ಈ ಫೋನ್ ಮೂರು ಆಕರ್ಷಕ ಕಲರ್ ಆಯ್ಕೆಯಲ್ಲಿ ಖರೀದಿ ಲಭ್ಯವಿದೆ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ಗೆ ಲಭ್ಯ ಇರುವ ಆಫರ್ ಬಗ್ಗೆ ಮುಂದೆ ತಿಳಿಯೋಣ.
Also Read : Motorola G96 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ! ಈ ಚಾನ್ಸ್ ಕಳ್ಕೋಬೇಡಿ
ರಿಯಲ್‌ಮಿ ನಾರ್ಜೋ 90x 5G ಸ್ಮಾರ್ಟ್‌ಫೋನ್ ಸದ್ಯ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಸಖತ್ ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ವೇರಿಯಂಟ್ ಬೆಲೆ 15,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 12,999 ರೂ.ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಆಸಕ್ತ ಗ್ರಾಹಕರು ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ ಹೆಚ್ಚುವರಿ ರಿಯಾಯಿತಿ ಸಹ ಪಡೆಯಬಹುದಾಗಿದೆ. ಇದರೊಂದಿಗೆ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಫೋನ್ ಫ್ಲ್ಯಾಶ್ ಬ್ಲೂ, ನಿಟ್ರೋ ಬ್ಲ್ಯೂ ಮತ್ತು ಮರೋನ್ ರೆಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ರಿಯಲ್‌ಮಿ ನಾರ್ಜೋ 90x 5G ಮೊಬೈಲ್ 144Hz ವರೆಗೆ ರಿಫ್ರೆಶ್ ರೇಟ್ ಸೌಲಭ್ಯದ ಜೊತೆಗೆ 6.80 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 1,200 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 4GB + 128GB, 6GB + 128GB ಹಾಗೂ 8GB + 128GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹಾಗೆಯೇ ರಿಯಲ್‌ಮಿ ನಾರ್ಜೋ 90x 5G ಮೊಬೈಲ್ ಹಿಂಭಾಗದಲ್ಲಿ 50MP ಸೋನಿ IMX852 ಕ್ಯಾಮೆರಾ ಸೆನ್ಸಾರ್ ಸೌಲಭ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 7,000mAh ಬ್ಯಾಟರಿ ಜೊತೆಗೆ 60W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.