144Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ Realme Narzo 90x 5G ಮೊಬೈಲ್‌ ದರದಲ್ಲಿ ಭಾರೀ ಕಡಿತ!

HIGHLIGHTS

ರಿಯಲ್‌ಮಿ ನಾರ್ಜೋ 90x 5G ಫೋನಿಗೆ ಅಮೆಜಾನ್‌ನಲ್ಲಿ ಆಫರ್‌ ಲಭ್ಯ

ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ 7,000mAh ಬ್ಯಾಟರಿ ಪಡೆದಿದೆ

ರಿಯಲ್‌ಮಿ ನಾರ್ಜೋ 90x ಮೊಬೈಲ್‌ ಮೂರು ಆಕರ್ಷಕ ಕಲರ್‌ನಲ್ಲಿ ಲಭ್ಯ

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme Narzo 90x 5G ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 7,000mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ 90x 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : ಅಗ್ಗದ ಬೆಲೆಗೆ 56 ದಿನಗಳ ವ್ಯಾಲಿಡಿಟಿ ಅಗತ್ಯ ಇದ್ದರೆ, Jio ಟೆಲಿಕಾಂನ ಈ ಪ್ಲಾನ್‌ ಸೂಪರ್!

Realme Narzo 90x 5G ಫೋನಿಗೆ ಸಖತ್ ಆಫರ್‌

ಬಜೆಟ್ ಬೆಲೆ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಗ್ರಾಹಕರ ಗಮನ ಸೆಳೆದಿರುವ ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 21,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಫ್ಲ್ಯಾಶ್‌ ಬ್ಲೂ, ನಿಟ್ರೋ ಬ್ಲ್ಯೂ ಮತ್ತು ಮರೂನ್ ರೆಡ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರಿಯಲ್‌ಮಿ ನಾರ್ಜೋ 90x 5G ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

Realme Narzo 90x 5G

ರಿಯಲ್‌ಮಿ ನಾರ್ಜೋ 90x 5G ಫೋನಿನ ಫೀಚರ್ಸ್‌

ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ 144Hz ವರೆಗೆ ರಿಫ್ರೆಶ್ ರೇಟ್‌ ಸೌಲಭ್ಯದ ಜೊತೆಗೆ 6.80 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 1,200 ನಿಟ್ಸ್‌ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದುಕೊಂಡಿದೆ. ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಇದು 4GB + 128GB, 6GB + 128GB ಹಾಗೂ 8GB + 128GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಹಾಗೆಯೇ ರಿಯಲ್‌ಮಿ ನಾರ್ಜೋ 90x 5G ಮೊಬೈಲ್‌ ಹಿಂಭಾಗದಲ್ಲಿ 50MP ಸೋನಿ IMX852 ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್‌ 8MP ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್‌ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 60W ವೈರ್ಡ್ ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯ ಪಡೆದಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :