Realme Narzo 90x Launched in India-
ಭಾರತದಲ್ಲಿ ಇಂದು ರಿಯಲ್‌ಮಿ ತನ್ನ ಹೊಚ್ಚ ಹೊಸ ಪ್ರೀಮಿಯಂ ಶ್ರೇಣಿಯ Realme Narzo 90x ಸ್ಮಾರ್ಟ್ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸ್ಮಾರ್ಟ್ಫೋನ್ ಪ್ರಸ್ತುತ ಪ್ರತ್ಯೇಕವಾಗಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಿದ್ದು ಅನೇಕ ಇಂಟ್ರೆಸ್ಟಿಂಗ್ ಫೀಚರ್ಗಳೊಂದಿಗೆ ಪ್ಯಾಕ್ ಮಾಡಲಾಗಿದೆ. ಈ ಸ್ಮಾರ್ಟ್ಫೋನ್ ಖರೀದಿಸುವ ಮುಂಚೆ ಇದರ ವಿಶೇಷತೆಗಳನ್ನು ನೋಡುವುದಾದರೆ ಇದರಲ್ಲಿ 50MP Sony ಸೆನ್ಸರ್ ಕ್ಯಾಮೆರಾ, 7000mAh ಬ್ಯಾಟರಿಯೊಂದಿಗೆ MediaTek Dimensity 6300 ಚಿಪ್ ಸಪೋರ್ಟ್ ಮಾಡುವುದರೊಂದಿಗೆ ಅತ್ಯುತ್ತಮ ಡ್ಯೂಯಲ್ ಸ್ಪೀಕರ್ ಹೊಂದಿದೆ. ಹೆಚ್ಚುವರಿಯಾಗಿ Realme Narzo 90x ಆರಂಭಿಕ ಮಾದರಿಯನ್ನು ಬ್ಯಾಂಕ್ ಆಫರ್ ಅಡಿಯಲ್ಲಿ ₹11,999 ರೂಗಳಿಗೆ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದು.
Also Read: Realme Narzo 90 ಬರೋಬ್ಬರಿ 7000mAh ಬ್ಯಾಟರಿಯೊಂದಿಗೆ ಬಿಡುಗಡೆ! ಆಫರ್ ಬೆಲೆ ಮತ್ತು ಫೀಚರ್ಗಳೇನು?
Realme Narzo 90x ಸ್ಮಾರ್ಟ್ಫೋನ್ ಒಟ್ಟಾರೆಯಾಗಿ ಮೂರು ರೂಪಾಂತದರಲ್ಲಿ ಫ್ಲಿಪ್ಕಾರ್ಟ್ ಮೂಲಕ ಲಭ್ಯವಾಗಲಿದ್ದು ಇದರ ಆರಂಭಿಕ 6GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹13,999 ರೂಗಳಿಗೆ ಮತ್ತು ಇದರ ಮತ್ತೊಂದು 8GB RAM ಮತ್ತು 128GB ಸ್ಟೋರೇಜ್ ರೂಪಾಂತರವನ್ನು ₹15,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ ಆಸಕ್ತ ಬಳಕೆದಾರರು ಇದನ್ನು ಆಯ್ದ ಬ್ಯಾಂಕ್ ಕಾರ್ಡ್ ಬಳಸಿಕೊಂಡು ಸುಮಾರು 2000 ರೂಗಳ ಡಿಸ್ಕೌಂಟ್ ಪಡೆಯುವ ಮೂಲಕ ಈ ಸ್ಮಾರ್ಟ್ಫೋನ್ ಆರಂಭಿಕ ಮಾದರಿಯನ್ನು ಸುಮಾರು 11,999 ರೂಗಳ ವರೆಗೆ ಕಡಿಮೆ ಬೆಲೆಯಲ್ಲಿ ಖರೀದಿಗೆ ಪ್ರಯತ್ನಿಸಬಹುದು. ಈ Realme Narzo 90x ಸ್ಮಾರ್ಟ್ಫೋನ್ 24 ಡಿಸೆಂಬರ್ 2025 ರಂದು ಫ್ಲಿಪ್ಕಾರ್ಟ್ ಮತ್ತು ರಿಯಲ್‌ಮಿ ಸೈಟ್ ಮೂಲಕ ಮೊದಲ ಮಾರಾಟಕ್ಕೆ ಲಭ್ಯವಾಗಲಿದೆ.
Realme Narzo 90x ಸ್ಮಾರ್ಟ್ಫೋನ್ 6. ಇಂಚಿನ FHD+ 1570×720 ಪಿಕ್ಸೆಲ್‌ಗಳ ಡಿಸ್ಪ್ಲೇ ಪೂರ್ತಿ 144Hz ರಿಫ್ರೆಶ್ ರೇಟ್ ಹೊಂದಿದೆ. ಈ ಸ್ಮಾರ್ಟ್ಫೋನ್ ಕಾಮೆರದಲ್ಲಿ 50MP Sony IMX852 ಸೆನ್ಸರ್ ಹೊಂದಿದ್ದು AI- ಬೆಂಬಲಿತ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಸ್ಮಾರ್ಟ್ಫೋನ್ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8MP ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ.
Realme Narzo 90x ಫೋನ್ MediaTek Dimensity 6300 ಪ್ರೊಸೆಸರ್ ಮತ್ತು ಆಂಡ್ರಾಯ್ಡ್ 16 ಆಪರೇಟಿಂಗ್ ಸಿಸ್ಟಮ್ ಜೊತೆಗೆ realme UI 6.0 ಬರುತ್ತದೆ. ಇದರ ಕನೆಕ್ಟಿಂಗ್ ಆಯ್ಕೆಗಳಲ್ಲಿ ಮುಖ್ಯವಾಗಿ Bluetooth, GPS, WiFi, 3.5mm Audio Jack, USB Type C Charge Port, Proximity sensor, Ambient light sensor, E-compass, Accelerometer, Gyroscope, ಸೆನ್ಸರ್‌ಗಳನ್ನು ಹೊಂದಿದೆ. ಕೊನೆಯದಾಗಿ Realme Narzo 90x ಸ್ಮಾರ್ಟ್ಫೋನ್ 7000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಮತ್ತು 60W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಡಸ್ಟ್ ಮತ್ತು ವಾಟರ್ ಪ್ರೂಫ್ ಅಡಿಯಲ್ಲಿ IP65 ಸಪೋರ್ಟ್ ಮಾಡುತ್ತದೆ.