10,001mAh ಬ್ಯಾಟರಿ ಇರುವ Realme Narzo Power ಮೊಬೈಲ್‌ ಖರೀದಿಸಲು ಇದುವೇ ಬೆಸ್ಟ್‌ ಟೈಮ್‌!

HIGHLIGHTS

ಅಮೆಜಾನ್‌ ಸೇಲ್‌ನಲ್ಲಿ ರಿಯಲ್‌ಮಿ ನಾರ್ಜೋ ಪವರ್‌ ಫೋನಿಗೆ ಉತ್ತಮ ಆಫರ್

ರಿಯಲ್‌ಮಿ ನಾರ್ಜೋ ಪವರ್‌ ಮೊಬೈಲ್‌ 10,001mAh ಬ್ಯಾಟರಿ ಬೆಂಬಲ ಪಡೆದಿದೆ

ಈ ಮೊಬೈಲ್‌ Meditek Dimensity 7400 Ultra ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ

ಜನಪ್ರಿಯ ಇ ಕಾಮರ್ಸ್‌ ಅಮೆಜಾನ್‌ ಆಯೋಜಿಸಿರುವ Amazon Great Indian Festival Sale 2026 ಸೇಲ್ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಮಾರಾಟದಲ್ಲಿ ಆಯ್ದ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಆ ಪೈಕಿ ರಿಯಲ್‌ಮಿ ಕಂಪನಿಯ Realme Narzo Power ಮೊಬೈಲ್‌ ಆಕರ್ಷಕ ಆಫರ್‌ ದರದಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಈ ಮೊಬೈಲ್‌ Meditek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್‌ 10,001mAh ಬ್ಯಾಟರಿ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್‌ ಆಕರ್ಷಕ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ ಪವರ್‌ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.

Also Read : 32MP ಸೆಲ್ಫಿ ಕ್ಯಾಮೆರಾ ಒಳಗೊಂಡ Vivo S2 ಮೊಬೈಲ್‌ ಖರೀದಿಸಲು ಈ ಆಫರ್‌ ಅತ್ಯುತ್ತಮ!

Realme Narzo Power ಫೋನಿಗೆ ಭರ್ಜರಿ ಆಫರ್‌

ಮೀಡ್‌ರೇಂಜ್‌ ದರ ಹಾಗೂ ಆಕರ್ಷಕ ಫೀಚರ್ಸ್‌ ಮೂಲಕ ಮಾರುಕಟ್ಟೆಯ ಗಮನ ಸೆಳೆದಿರುವ ರಿಯಲ್‌ಮಿ ನಾರ್ಜೋ ಪವರ್‌ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಮೊಬೈಲ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 35,999 ರೂ.ಗಳು ಆಗಿದ್ದು, ಆದರೆ ಆಫರ್‌ನಲ್ಲಿ ಪ್ರಸ್ತುತ ಈ ಮೊಬೈಲ್‌ 29,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್‌ ಅನ್ನು ಗ್ರಾಹಕರು ಟೈಟಾನ್‌ ಸಿಲ್ವರ್‌ ಹಾಗೂ ಟೈಟಾನ್‌ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಸಬಹುದು. ರಿಯಲ್‌ಮಿ ನಾರ್ಜೋ ಪವರ್‌ ಸ್ಮಾರ್ಟ್‌ಫೋನ್‌ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ.

ರಿಯಲ್‌ಮಿ ನಾರ್ಜೋ ಪವರ್‌ ಮೊಬೈಲ್‌ ಫೀಚರ್ಸ್‌ ಹೀಗಿವೆ

ರಿಯಲ್‌ಮಿ ನಾರ್ಜೋ ಪವರ್‌ ಮೊಬೈಲ್‌ 6.8 ಇಂಚಿನ FHD+ 144Hz ಹೈಪರ್‌ಗ್ಲೋ 4D ಕರ್ವ್+ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್‌ 6500 nits ವರೆಗಿನ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್‌ Meditek Dimensity 7400 Ultra ಮತ್ತು HyperVision+ AI ಚಿಪ್‌ ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಇದು 8GB RAM ಜೊತೆಗೆ 14GB ವರೆಗಿನ ವರ್ಚುವಲ್ RAM ಅನ್ನು ಸಪೋರ್ಟ್‌ ಮಾಡುತ್ತದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,001mAh ಬ್ಯಾಟರಿ ಸಪೋರ್ಟ್‌ ಜೊತೆಗೆ 80W ಫಾಸ್ಟ್‌ ಚಾರ್ಜಿಂಗ್‌ ವ್ಯವಸ್ಥೆ ಒಳಗೊಂಡಿದೆ. ಇದರೊಂದಿಗೆ 27W ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ಹಾಗೆಯೇ ರಿಯಲ್‌ಮಿ ನಾರ್ಜೋ ಪವರ್‌ ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್‌ ಆಗಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP IMX480 ಕ್ಯಾಮೆರಾ ಪಡೆದುಕೊಂಡಿದೆ. ಇದು 4K ರೆಸಲ್ಯೂಶನ್‌ ಕ್ವಾಲಿಟಿಯ ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಮೊಬೈಲ್‌ ಆಂಡ್ರಾಯ್ಡ್ 16 ಓಎಸ್‌ ಜೊತೆಗೆ ರಿಯಲ್‌ಮಿ UI 7.0 ಸಪೋರ್ಟ್ ಪಡೆದುಕೊಂಡಿದೆ.

Disclosure: This Article Contains Affiliate Links

Manthesh B

ಮಾಂತೇಶ್ ಎಂ.ಬಿ. ಅವರು ಮಾಧ್ಯಮ ಕ್ಷೇತ್ರದಲ್ಲಿ ಎಂಟು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಪತ್ರಕರ್ತರು. ಪ್ರಸ್ತುತ ಅವರು ಟೈಮ್ಸ್ ಗ್ರೂಪ್‌ನ ಡಿಜಿಟ್ ಕನ್ನಡ ವಿಭಾಗದಲ್ಲಿ ಚೀಫ್ ಕಾಪಿ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆ, ಟಿವಿ ಹಾಗೂ ವೆಬ್ ಪೋರ್ಟಲ್‌ಗಳಲ್ಲಿ ಅನುಭವ ಪಡೆದಿರುವ ಅವರು, ಈ ಹಿಂದೆ ಒನ್‌ಇಂಡಿಯಾ ಸಂಸ್ಥೆಯ ಗಿಜ್‌ಬಾಟ್ ಟೆಕ್ ವಿಭಾಗದಲ್ಲಿಯೂ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

Connect On :