ರಿಯಲ್‌ಮಿ ಮೊಬೈಲ್ ಸಂಸ್ಥೆಯ ಇತ್ತೀಚಿನ ಫೋನ್‌ಗಳ ಪೈಕಿ ಒಂದಾದ Realme Narzo Power ಸ್ಮಾರ್ಟ್‌ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಆಫರ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ. ಕಂಪನಿಯ ಈ ಮೊಬೈಲ್ Meditek Dimensity 7400 Ultra ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಈ ಫೋನ್ 10,001mAh ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಅಲ್ಲದೇ ಈ ಮೊಬೈಲ್ ಟೈಟಾನ್ ಸಿಲ್ವರ್ ಹಾಗೂ ಟೈಟಾನ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ನಾರ್ಜೋ ಪವರ್ ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
Also Read : Vi ಟೆಲಿಕಾಂನ ಈ ಬಜೆಟ್ ಬೆಲೆಯ ಪ್ಲಾನಿನಲ್ಲಿ ಡೇಟಾ ಜೊತೆಗೆ ಜನಪ್ರಿಯ ಓಟಿಟಿ ಪ್ರಯೋಜನ
ಬಿಗ್ ಬ್ಯಾಟರಿ ಸೇರಿದಂತೆ ಕೆಲವು ಆಕರ್ಷಕ ಫೀಚರ್ಸ್ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರಿಯಲ್‌ಮಿ ನಾರ್ಜೋ ಪವರ್ ಫೋನ್ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಗಮನಾರ್ಹ ರಿಯಾಯಿತಿ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 35,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಆಕರ್ಷಕ EMI ಆಯ್ಕೆಗಳು ಲಭ್ಯ ಇವೆ. ಇನ್ನು ಈ ಮೊಬೈಲ್ ಎರಡು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಟೈಟಾನ್ ಸಿಲ್ವರ್ ಹಾಗೂ ಟೈಟಾನ್ ಬ್ಲೂ ಆಗಿವೆ.
ರಿಯಲ್‌ಮಿ ನಾರ್ಜೋ ಪವರ್ ಸ್ಮಾರ್ಟ್‌ಫೋನ್ 6.8 ಇಂಚಿನ FHD+ 144Hz ಹೈಪರ್‌ಗ್ಲೋ 4D ಕರ್ವ್+ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 6500 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ Meditek Dimensity 7400 Ultra ಮತ್ತು HyperVision+ AI ಚಿಪ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಇದು 8GB RAM ಜೊತೆಗೆ 14GB ವರೆಗಿನ ವರ್ಚುವಲ್ RAM ಅನ್ನು ಸಪೋರ್ಟ್ ಮಾಡುತ್ತದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,001mAh ಬ್ಯಾಟರಿ ಸಪೋರ್ಟ್ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ. ಇದರೊಂದಿಗೆ 27W ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಹಾಗೆಯೇ ರಿಯಲ್‌ಮಿ ನಾರ್ಜೋ ಪವರ್ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP IMX480 ಕ್ಯಾಮೆರಾ ಪಡೆದುಕೊಂಡಿದೆ. ಇದು 4K ರೆಸಲ್ಯೂಶನ್ ಕ್ವಾಲಿಟಿಯ ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಮೊಬೈಲ್ ಆಂಡ್ರಾಯ್ಡ್ 16 ಓಎಸ್ ಜೊತೆಗೆ ರಿಯಲ್‌ಮಿ UI 7.0 ಸಪೋರ್ಟ್ ಪಡೆದುಕೊಂಡಿದೆ.