ಜನಪ್ರಿಯ ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ Realme Narzo Power ಮೊಬೈಲ್ ಈಗಾಗಲೇ ಬಿಗ್ ಬ್ಯಾಟರಿ ಮೂಲಕ ಗ್ರಾಹಕರಿಗೆ ಗಮನ ಸೆಳೆದಿದೆ. ಇನ್ನು ಈ ಮೊಬೈಲ್‌ನ ಮಾರಾಟ ಇಂದಿನಿಂದ (ಮಾರ್ಚ್ 10 ರಿಂದ) ಅಮೆಜಾನ್ ತಾಣದಲ್ಲಿ ಪ್ರಾರಂಭ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಅಲ್ಟ್ರಾ 5G ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಈ ಮೊಬೈಲ್ 10,001mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ IMX882 ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ ಟೈಟಾನ್ ಸಿಲ್ವರ್ ಹಾಗೂ ಟೈಟಾನ್ ಬ್ಲೂ ಕಲರ್ ಆಯ್ಕೆಗಳನ್ನು ಹೊಂದಿದೆ. ಹಾಗಾದರೆ ರಿಯಲ್‌ಮಿ ನಾರ್ಜೋ ಪವರ್ ಮೊಬೈಲ್‌ನ ಸೇಲ್, ಬೆಲೆ ಹಾಗೂ ಫೀಚರ್ಸ್ ಕುರಿತ ಇನ್ನಷ್ಟು ಮಾಹಿತಿಗಳನ್ನು ಮುಂದೆ ತಿಳಿಯೋಣ.
Also Read : ಅಗ್ಗದ ಪ್ರೈಸ್‌ಟ್ಯಾಗ್‌ನಲ್ಲಿ Poco C85x 5G ಮೊಬೈಲ್ ಬಿಡುಗಡೆ! ಬಿಗ್ ಬ್ಯಾಟರಿ ಸೌಲಭ್ಯ ಇದೆ
ರಿಯಲ್‌ಮಿ ಕಂಪನಿಯ ರಿಯಲ್‌ಮಿ ನಾರ್ಜೋ ಪವರ್ ಮೊಬೈಲ್ ಇಂದಿನಿಂದ (ಮಾರ್ಚ್ 10 ರಿಂದ) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನ ಮೂಲಕ ಮಾರಾಟ ಪ್ರಾರಂಭಿಸಿದೆ. ಇನ್ನು ಅಮೆಜಾನ್ ವೆಬ್‌ಸೈಟ್‌ನಲ್ಲಿ ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್ 26,999 ರೂಗಳ ಬೆಲೆಯನ್ನು ಹೊಂದಿದೆ. ಅದೇ ರೀತಿ 8GB RAM + 256GB ಸ್ಟೋರೇಜ್ ವೇರಿಯಂಟ್ ಮಾಡೆಲ್ 28,999 ರೂಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ ಅಮೆಜಾನ್ ಮತ್ತು ರಿಯಲ್‌ಮಿ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಿದೆ. ಇನ್ನು ಈ ಮೊಬೈಲ್ ಎರಡು ಬಣ್ಣಗಳ ಆಯ್ಕೆ ಪಡೆದಿದ್ದು ಅವುಗಳು ಕ್ರಮವಾಗಿ ಟೈಟಾನ್ ಸಿಲ್ವರ್ ಹಾಗೂ ಟೈಟಾನ್ ಬ್ಲೂ ಆಗಿವೆ.
ರಿಯಲ್‌ಮಿ ನಾರ್ಜೋ ಪವರ್ ಸ್ಮಾರ್ಟ್‌ಫೋನ್ 6.8 ಇಂಚಿನ FHD+ 144Hz ಹೈಪರ್‌ಗ್ಲೋ 4D ಕರ್ವ್+ OLED ಡಿಸ್‌ಪ್ಲೇ ಅನ್ನು ಹೊಂದಿದೆ. ಇದರ ಸ್ಕ್ರೀನ್ 6500 nits ವರೆಗಿನ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ Meditek Dimensity 7400 Ultra ಮತ್ತು HyperVision+ AI ಚಿಪ್ ಪ್ರೊಸೆಸರ್ ಸಾಮರ್ಥ್ಯ ಪಡೆದಿದೆ. ಇದಕ್ಕೆ ಪೂರಕವಾಗಿ ಇದು 8GB RAM ಜೊತೆಗೆ 14GB ವರೆಗಿನ ವರ್ಚುವಲ್ RAM ಅನ್ನು ಸಪೋರ್ಟ್ ಮಾಡುತ್ತದೆ. ಪ್ರಮುಖ ಹೈಲೈಟ್‌ಯೆಂದರೆ ಇದು 10,001mAh ಬ್ಯಾಟರಿ ಸಪೋರ್ಟ್ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಒಳಗೊಂಡಿದೆ. ಇದರೊಂದಿಗೆ 27W ರಿವರ್ಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಹಾಗೆಯೇ ರಿಯಲ್‌ಮಿ ನಾರ್ಜೋ ಪವರ್ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8MP ಅಲ್ಟ್ರಾ ವೈಡ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 16MP IMX480 ಕ್ಯಾಮೆರಾ ಪಡೆದುಕೊಂಡಿದೆ. ಇದು 4K ರೆಸಲ್ಯೂಶನ್ ಕ್ವಾಲಿಟಿಯ ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಮೊಬೈಲ್ ಆಂಡ್ರಾಯ್ಡ್ 16 ಓಎಸ್ ಜೊತೆಗೆ ರಿಯಲ್‌ಮಿ UI 7.0 ಸಪೋರ್ಟ್ ಪಡೆದುಕೊಂಡಿದೆ.